ರಾಜ್ಯ

ಬೀಬಿಬದಿ ವ್ಯಾಪಾರಿಗಳ ಶ್ರೇಯೋಭಿವೃದ್ಧಿಗೆ ಕ್ರಮ : ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು : ಬೀದಿಬದಿಯ ವ್ಯಾಪಾರಿಗಳ ಶ್ರೇಯೋಭಿವೃದ್ಧಿಗಾಗಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನೂ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್‍ಗಾಂಧಿಯವರ ಪತ್ರಕ್ಕೆ ಪ್ರತ್ಯುತ್ತರಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಈ ಮೊದಲು 2013 ರಿಂದ 2018ರ ನಡುವೆ ತಮ ಸರ್ಕಾರ ಅಧಿಕಾರದಲ್ಲಿದ್ದಾಗ ಬೀದಿ ಬದಿಯ ವ್ಯಾಪಾರಿಗಳಿಗೆ ನಿಯಮಗಳು ಹಾಗೂ ಪ್ರಕ್ರಿಯೆಗಳನ್ನು ಚಾಲನೆ ನೀಡಲಾಯಿತು.

ವಿವಿಧ ನಗರ ವ್ಯಾಪಾರ ಸಮಿತಿಗಳನ್ನು 2017 ರಲ್ಲಿ ಮೊದಲ ಬಾರಿಗೆ ರಚಿಸಲಾಗಿತ್ತು. 2019 ರಂದು ಮತ್ತೆ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. 2022 ರಲ್ಲಿ ಅದು ಪುನರಾವರ್ತನೆಯಾಗಲಿಲ್ಲ ಎಂದು ವಿಷಾದಿಸಿದ್ದಾರೆ.

ಮರಳಿ ನಾವು ಅಧಿಕಾರಕ್ಕೆ ಬಂದ ಬಳಿಕ ಬೀದಿ ಬದಿ ವ್ಯಾಪಾರಿಗಳ ಕಾಯಿದೆ 2014 ನ್ನು ಆಧರಿಸಿ ಸಮೀಕ್ಷೆ ನಡೆಸಲಾಗುತ್ತಿದೆ. ಅದರ ಪ್ರಕಾರ ಬೆಂಗಳೂರು ನಗರದಲ್ಲಿ 27,655 ಮಂದಿ ಬೀದಿ ಬದಿಯ ವ್ಯಾಪಾರಿಗಳು ನೋಂದಣಿಯಾಗಿದ್ದಾರೆ. 2025 ರ ಏಪ್ರಿಲ್ ವೇಳೆಗೆ ನಗರ ವ್ಯಾಪಾರ ಸಮಿತಿಗಳು ಪೂರ್ಣಗೊಂಡಿವೆ ಎಂದು ತಿಳಿಸಿದ್ದಾರೆ.

189 ವಿವಿಧ ಮಾದರಿಯ ವ್ಯಾಪಾರ ವಲಯಗಳು 10,162 ವ್ಯಾಪಾರ ಸ್ಥಳಗಳನ್ನು ಗುರುತಿಸಲಾಗಿದೆ. ಬೀದಿಬದಿ ವ್ಯಾಪಾರಿಗಳಿಗಾಗಿ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಅವರ ಮಕ್ಕಳಿಗೆ ಶಿಕ್ಷಣ, ಆರೋಗ್ಯ ಸೌಲಭ್ಯಗಳು, ವಸತಿ, ಕೌಶಲ್ಯ ತರಬೇತಿಗಳನ್ನು ನೀಡಲಾಗುತ್ತದೆ. ಜೊತೆಗೆ ಅವರಿಗೆ ಎಲೆಕ್ಟ್ರಾನಿಕ್ ವಾಹನಗಳನ್ನು ನೀಡುವ ಮೂಲಕ ಮತ್ತಷ್ಟು ಸಶಕ್ತಗೊಳಿಸಲಾಗಿದೆ ಎಂದು ವಿವರಿಸಿದ್ದಾರೆ.

2024-25ನೇ ಸಾಲಿಗೆ 3,778 ಮಂದಿಯನ್ನು ಬೀದಿಬದಿ ವ್ಯಾಪಾರದ ಗಾಡಿಗಳ ವಿತರಣೆಗಾಗಿ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

11 hours ago