Mysore
14
few clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಗಂಗಾವತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ : ಸಿಎಂ ಸಿದ್ದರಾಮಯ್ಯ

cm siddaramaiah

ವಿಜಯನಗರ : ಗಂಗಾವತಿ ಶಾಸಕ ಜನಾರ್ಧನ ರೆಡ್ಡಿಗೆ ನ್ಯಾಯಾಲಯ ಏಳು ವರ್ಷಗಳ ಶಿಕ್ಷೆಗೆ ಗುರಿಪಡಿಸಿದ್ದು, ಸಂವಿಧಾನದಂತೆ ಅವರು ಅನರ್ಹರಾಗುತ್ತಾರೆ. ಈ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದರೆ, ಪಕ್ಷದ ತೀರ್ಮಾನದಂತೆ ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾವತಿ ವಿಧಾನಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಖಂಡಿತ ಗೆಲ್ಲುತ್ತದೆ. ಪ್ರಜಾಪ್ರಭುತ್ವದಲ್ಲಿ ಟೀಕಿಸುವುದು ಸಹಜ. ಆದರೆ ನಮ್ಮ ಸರ್ಕಾರದ ಸಾಧನೆ, ನಮ್ಮ ಬದ್ಧತೆಯ ಬಗ್ಗೆ ಜನರಿಗೆ ತಿಳಿದೇ ತಿಳಿಯುತ್ತದೆ ಎಂದರು.

ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಶಿಕ್ಷೆಯಾಗಬೇಕು
2008-2013ರವರೆಗೆ ವಿರೋಧಪಕ್ಷದ ನಾಯಕನಾಗಿ , ಲೋಕಾಯುಕ್ತ ಸಂತೋಷ್ ಹೆಗಡೆ ಅವರ ಅಕ್ರಮ ಗಣಿಗಾರಿಕೆಯ ವರದಿ ಆಧರಿಸಿ, ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲಾಗಿತ್ತು. ಅಂದು ಬಿಜೆಪಿ ಸರ್ಕಾರದ ಅದನ್ನು ವಿರೋಧಿಸಿತ್ತು. ಅಂದು ಅಕ್ರಮ ಗಣಿಗಾರಿಕೆ ವಿರುದ್ಧ ನಡೆಸಿದ ಹೋರಾಟಕ್ಕೆ ಇಂದು ಫಲ ದೊರೆತಿದೆ. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಶಿಕ್ಷೆಯಾಗಬೇಕು ಹಾಗೂ ಅಕ್ರಮ ಗಣಿಗಾರಿಕೆ ನಿಲ್ಲಬೇಕು ಎಂದು ತಿಳಿಸಿದರು.

ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ಸದಾ ವಿರೋಧಿಸಿದ್ದೇನೆ
ಸಿದ್ದರಾಮಯ್ಯನವರು ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ತನಗೆ ಸಹಾಯ ಮಾಡಿದ್ದರು ಎಂದು ಜನಾರ್ಧನ ರೆಡ್ಡಿಯವರ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಿ, ಅವರ ಹೇಳಿಕೆ ಅಪ್ಪಟ ಸುಳ್ಳು. ಅವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ. ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Tags:
error: Content is protected !!