ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಕ್ಲೀನ್ ಚಿಟ್ ವಿಚಾರ ನನಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವದಂತಿಯನ್ನು ತಳ್ಳಿಹಾಕಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿಗೆ ಕ್ಲೀನ್‌ಚಿಟ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿದ್ದವು.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಲೋಕಾಯುಕ್ತ ತನಿಖೆಯಲ್ಲಿ ಮುಡಾ ಪ್ರಕರಣದಲ್ಲಿ ಕ್ಲೀನ್ ಚಿಟ್ ಸುದ್ದಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಈ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಗೆ ಹೋಗಬೇಕಿತ್ತು. ಆದರೆ ಬಜೆಟ್ ತಯಾರಿ ಇದೆ. ಹೀಗಾಗಿ ಅಲ್ಲಿಗೆ ಹೋಗುತ್ತಿಲ್ಲ. ಕಳೆದ ವರ್ಷವೂ ನಾನು ಅಲ್ಲಿಗೆ ಹೋಗಿರಲಿಲ್ಲ ಎಂದು ತಿಳಿಸಿದರು.