ರಾಜ್ಯ

ಮುಡಾ ಕೇಸ್‌ನಲ್ಲಿ ಕ್ಲೀನ್‌ ಚಿಟ್‌ ವಿಚಾರ ನನಗೆ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಮುಡಾ ಕೇಸ್‌ನಲ್ಲಿ ಕ್ಲೀನ್‌ ಚಿಟ್‌ ವಿಚಾರ ನನಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವದಂತಿಯನ್ನು ತಳ್ಳಿಹಾಕಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂದು ಮೂಲಗಳು ತಿಳಿಸಿದ್ದವು.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಲೋಕಾಯುಕ್ತ ತನಿಖೆಯಲ್ಲಿ ಮುಡಾ ಪ್ರಕರಣದಲ್ಲಿ ಕ್ಲೀನ್‌ ಚಿಟ್‌ ಸುದ್ದಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಈ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ನಾನು ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಗೆ ಹೋಗಬೇಕಿತ್ತು. ಆದರೆ ಬಜೆಟ್‌ ತಯಾರಿ ಇದೆ. ಹೀಗಾಗಿ ಅಲ್ಲಿಗೆ ಹೋಗುತ್ತಿಲ್ಲ. ಕಳೆದ ವರ್ಷವೂ ನಾನು ಅಲ್ಲಿಗೆ ಹೋಗಿರಲಿಲ್ಲ ಎಂದು ತಿಳಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಪರೀಕ್ಷೆ ವೇಳೆ ವಿದ್ಯುತ್ ಕಡಿತ ಮಾಡದಿರಿ

ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…

3 mins ago

ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಇಲ್ಲ

ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟು ಸಂಗ್ರಹ ವಿದ್ದು, ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ…

7 mins ago

ತುಳುನಾಡಿನ ಯುಗಾದಿ ‘ಬಿಸು’ವಿಗಾಗಿ ಇನ್ನೂ ಇಪ್ಪತ್ತೆಂಟು ದಿನ

ಅಕ್ಷತಾರಾಜ್ ಪೆರ್ಲ, ಕನ್ನಡ, ತುಳು ಉಭಯ ಭಾಷಾ ಲೇಖಕಿ  ಯುಗಾದಿ ಹಬ್ಬದ ಆಚರಣೆ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ ಇದ್ದು,…

13 mins ago

ಕೊಂಕಣಿ ಬಂಧುಗಳ ಉಗಾದಿ ಎಂದರೆ ಪೂರಣ್ ಪೋಳಿ, ದಾಳಿತೋಯ್, ಉಬ್ಬಟಿ ಮತ್ತು ಕಡ್ಲೆಬೇಳೆ ಪಾಯಸ

ಸುಮತಿ ಶೆಣೈ, ಲೇಖಕಿ ಮತ್ತು ಅನುವಾದಕಿ ಪ್ರತಿ ಹಬ್ಬದ ಆಚರಣೆಯನ್ನೂ ಅಂದು ತಯಾರಿಸುವ ಗೌಡ ಸಾರಸ್ವತ ಬ್ರಾಹ್ಮಣ- ಸಮುದಾಯಕ್ಕೇ ಸೀಮಿತವಾದ…

17 mins ago

ಯುಗಾದಿ ವಿಶೇಷ | ಧಾರವಾಡದ ಮಣ್ಣಿನಲ್ಲಿ ಹಸಿರು ಚಿಗುರಿದ ಕಂಪನ

ಭಾಗ್ಯಜ್ಯೋತಿ ಹಿರೇಮಠ, ಗುಡಗೇರಿ, ಕಥೆಗಾರ್ತಿ ಮತ್ತು ಕವಯಿತ್ರಿ ಉತ್ತರ ಕರ್ನಾಟಕದ ಬಯಲು ಸೀಮೆಯಲ್ಲಿ ಚೈತ್ರದ ಬಿಸಿಲು ಅಪ್ಪಳಿಸುತ್ತಿದ್ದಂತೆಯೇ ಗಾಳಿಯಲ್ಲಿ ಒಣಗಿದ…

1 hour ago

ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ

ಜೇನುಕುರುಬರ ಡೋಬಿ, ಮಾವುತ ಮತ್ತು ಗಾಯಕ ದುಬಾರೆ ಆನೆ ಶಿಬಿರ ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ…

2 hours ago