ಗದಗ : ಸಂವಿಧಾನ ಜಾರಿಯಾಗಿ 75 ವರ್ಷವಾದರೂ ಸಂಪೂರ್ಣ ಶಿಕ್ಷಣ ಸಾಧ್ಯವಾಗಿಲ್ಲ ಎಂದು ಸಿ.ಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ಗದಗದ ಕರ್ನಾಟಕ ಕುರುಬರ ಸಂಘ ಆಯೋಜಿಸಿದ್ದ ಕರ್ನಾಟಕ ಕುರುಬರ ಸಹಕಾರ ಪರಿಷತ್ತಿನ ಸಂಘದ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ಅವರು ಕೊಟ್ಟಿರುವ ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಎಲ್ಲರೂ ಪಾಲಿಸಿಬೇಕು. ನೂರು ವರ್ಷಗಳ ಹಿಂದೆಯೇ ಕುರುಬ ಸಮಾಜವನ್ನು ಸಂಘಟಿಸಿ ಸಹಕಾರ ಸಂಘ ಸ್ಥಾಪಿಸಿದ್ದು ಅತ್ಯಂತ ಮುಂದಾಲೋಚನೆಯ ಸಾಮಾಜಿಕ ನ್ಯಾಯದ ಕಾರ್ಯ ಎಂದರು.
ಶಿಕ್ಷಣ-ಸಂಘಟನೆ-ಹೋರಾಟ ಅಂಬೇಡ್ಕರ್ ಅವರು ದೇಶದ ಹಿಂದುಳಿದವರಿಗೆ ಕೊಟ್ಟಿರುವ ಮಂತ್ರ. ಆದರೆ, ಸಂವಿಧಾನ ಜಾರಿಗೆ ಮೊದಲೇ ಮುಂದಾಲೋಚನೆಯಿಂದ ಪತ್ತಿನ ಸಹಕಾರ ಸಂಘ ಸ್ಥಾಪಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯ ಎಂದು ಹೇಳಿದರು.
ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಶೂದ್ರ ವರ್ಗದ ಜನ ಹಿಂದುಳಿಯಲು ಅವರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೇ ಪ್ರಮುಖ ಕಾರಣ. ಶೂದ್ರರು, ದಲಿತರು ಮಾತ್ರ ಶಿಕ್ಷಣ ಪಡೆಯುವಂತಿರಲಿಲ್ಲ . ಅಂಬೇಡ್ಕರ್ ಅವರ ಜೀವಮಾನದ ಹೋರಾಟವೇ ಈ ಅಸಮಾನತೆಯನ್ನು ಅಳಿಸುವುದಾಗಿತ್ತು. ಇದಕ್ಕೆ ಶಿಕ್ಷಣವೇ ಪ್ರಮುಖ ಅಸ್ತ್ರ ಎಂದು ಅಂಬೇಡ್ಕರ್ ಮನಗಂಡಿದ್ದರು.
ಶಿಕ್ಷಣ ದೊರಕದಿದ್ದರೆ ಸ್ವಾಭಿಮಾನಿಗಳಾಗಿ ಇರಲು ಸಾಧ್ಯವೇ ಇಲ್ಲ. ನನಗೆ ರಾಜಪ್ಪ ಎನ್ನುವ ಶಿಕ್ಷಕರು ಸಿಗದೇ ಹೋಗಿದ್ದರೆ ನನಗೆ ಶಿಕ್ಷಣವೂ ಸಿಗುತ್ತಿರಲಿಲ್ಲ, ನಾನು ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ. ಹಸು ಕಾಯ್ಕೊಂಡು ಇರಬೇಕಾಗಿತ್ತು ಎಂದರು.
ಅದಕ್ಕೇ ನಮ್ಮ ಸರ್ಕಾರ ಶಿಕ್ಷಣ-ಆರೋಗ್ಯ-ಅನ್ನಕ್ಕೆ ಪ್ರಮುಖ ಆಧ್ಯತೆ ನೀಡುತ್ತಿದೆ. ಅಂಬೇಡ್ಕರ್, ಬಸವಣ್ಣ, ಮಹಾತ್ಮ ಗಾಂಧಿಯವರ ಆಶಯಗಳು ಈಡೇರಬೇಕಾದರೆ ಸರ್ವರಿಗೂ ಶಿಕ್ಷಣ ಸಿಗಬೇಕು. ಎಲ್ಲರಿಗೂ ಆರ್ಥಿಕ ಶಕ್ತಿ ಬರಬೇಕು ಎಂದರು.
ಗುಂಡ್ಲುಪೇಟೆ : ತಾಲ್ಲೂಕಿನ ಮುಕ್ತಿ ಕಾಲೋನಿ ಗ್ರಾಮದ ಜಮೀನೊಂದರ ಬಾಳೆ ತೋಟದಲ್ಲಿ ಹುಲಿ ಕಾಣಿಸಿಕೊಂಡಿದ್ದು ಜನರು ಕಿರುಚಾಡಿ, ಪಟಾಕಿ ಸಿಡಿಸಿದರೂ…
ಮೈಸೂರು : ವನ್ಯಜೀವಿ ಛಾಯಾಗ್ರಹಣ ಹಾಗೂ ಸಾಕ್ಷ್ಯಚಿತ್ರ ತಯಾರಕರಾಗುವ ಮೊದಲು ಕಾಡಿನ ಭಾಷೆ ಅರಿತುಕೊಂಡಿರಬೇಕು ಎಂದು ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್…
ಮೈಸೂರು : ಮುಂಜಾನೆಯ ಚುಮುಚುಮು ಚಳಿಗೆ, ಸೂರ್ಯ ಇನ್ನೂ ಮಂಜಿನ ನಡುವೆ ಕಣ್ಣು ಬಿಡುವ ಮುನ್ನವೇ ಅರಮನೆಯ ಕೋಟೆ ಆಂಜನೇಯ…
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…
ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್ ಸೃಷ್ಟಿ ಮಾಡಿಲ್ಲ. ಲೋಕಲ್‌ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್…
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…