Mysore
23
few clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಹೊಸಪೇಟೆಯಲ್ಲಿ ಸರ್ಕಾರದ ಸಾಧನಾ ಸಮಾವೇಶ : ಸಿಎಂ

cm siddaramaiah

ವಿಜಯನಗರ(ಹೊಸಪೇಟೆ) : ಸರ್ಕಾರ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ ಹಿನ್ನೆಲೆ ಸಾಧನಾ ಸಮಾವೇಶವನ್ನು ವಿಜಯನಗರದ ಹೊಸಪೇಟೆಯಲ್ಲಿ ಮೇ 20 ರಂದು ಆಯೋಜಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಸುಮಾರು ಮೂರು ಲಕ್ಷ ಜನ ಆಗಮಿಸುವ ಸಾಧ್ಯತೆಯಿದೆ ಎಂದರು.

ಗ್ಯಾರಂಟಿಗೆ ಹಣದ ಕೊರತೆಯಿಲ್ಲ
ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಜನರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಕಳೆದ ವರ್ಷದಂತೆ ಈ ಸಾಲಿನ ಬಜೆಟ್ ನಲ್ಲಿಯೂ ಗ್ಯಾರಂಟಿಗಳಿಗೆ ಹಣ ಮೀಸಲಿರಿಸಲಾಗಿದೆ ಎಂದರು.

ಆಡಳಿತಾತ್ಮಕ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ರಚನೆ
ಗ್ರೇಟರ್ ಬೆಂಗಳೂರು ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಟೀಕಿಸುತ್ತಿರುವ ಬಗ್ಗೆ ಉತ್ತರಿಸಿ, ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ವಿಭಾಗಗಳನ್ನು ರಚಿಸಬೇಕೆಂದು ಅಂದಿನ ಬಿಜೆಪಿಯ ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ರವರು ಯೋಜಿಸಿದ್ದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನ ನೆಲೆಸಿದ್ದು, ಈ ನಗರದ ಆಡಳಿತವನ್ನು ಒಂದು ಮಹಾನಗರ ಪಾಲಿಕೆ ನಿರ್ವಹಿಸುವುದು ಕಷ್ಟಸಾಧ್ಯ. ಆದ್ದರಿಂದ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ಮಹಾನಗರಕ್ಕೆ ಮೂರು ಅಥವಾ ಹೆಚ್ಚು ಮಹಾನಗರಪಾಲಿಕೆಗಳನ್ನು ರಚಿಸಬೇಕೆಂಬ ಚಿಂತನೆಯಿಂದ ನನ್ನ ಹಿಂದಿನ ಮುಖ್ಯಮಂತ್ರಿಯ ಅವಧಿಯಲ್ಲಿ ಬಿ.ಎಸ್.ಪಾಟೀಲ್, ಸಿದ್ದಯ್ಯ ಅವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿತ್ತು. ಆದ್ದರಿಂದ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ, ಈ ಚಿಂತನೆಯನ್ನು ಕಾರ್ಯರೂಪಕ್ಕೆ ತರಲಾಗುತ್ತಿದೆ ಎಂದರು.

Tags:
error: Content is protected !!