ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣ ಕುರಿತು ಚರ್ಚೆಗೆ ವಿಧಾನಸಭೆಯಲ್ಲಿ ೧೨ ಪುಟಗಳ ಲಿಖಿತ ಉತ್ತರವನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದು, ಬಿಜೆಪಿ ಅವಧಿಯಲ್ಲಿ ಹಲವು ಹಗರಣ ನಡೆದಿದ್ದು, ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೇ ಬಿಡವುದಿಲ್ಲ ಎಂದು ಹೇಳಿದರು.
ವಿಧಾನಸಭೆಯಲ್ಲಿ ವಾಲ್ಮೀಕಿ ನಿಗಮದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ , ಬಿಜೆಪಿ ಅವಧಿಯಲ್ಲಿ ೨೧ ಹಗರಣ ನಡೆದಿದೆ. ಎಪಿಎಂಸಿ ಹಗರಣ, ಪ್ರವಾಸೋಧ್ಯಮ ಇಲಾಖೆಯಲ್ಲಿ ಅಕ್ರಮ, ಪಿಎಸ್ ಐ ನೇಮಕಾತಿಯಲ್ಲಿ ಅಕ್ರಮ, ಕೋವಿಡ್ ಹಗರಣ ಮುಂತಾದ ಹಗರಣಗಳು ನಡೆದಿವೆ . ನಿಮ್ಮನ್ನ ಕಳ್ಳರು ಲೂಟಿಕೋರರು ಅಂತ ಜನ ವಿಪಕ್ಷದಲ್ಲಿ ಕೂರಿಸಿದ್ದಾರೆ. ನಾವು ವಿಧಾನಸಭ ಚುನಾವಣೆಯಲ್ಲಿ ೧೩೬ ಸ್ಥಾನಗಳನ್ನ ಗೆದ್ದಿದ್ದೇವೆ. ಎಲ್ಲಾ ಹಗರಣಗಳನ್ನ ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೆ ಬಿಡಲ್ಲ. ತಪ್ಪು ಮಾಡಿದವರನ್ನ ಜೈಲಿಗೆ ಕಳುಹಿಸುತ್ತೇವೆ ಎಂದರು.
ಅಲ್ಲದೆ ವಿರೋಧ ಪಕ್ಷದವರ ವಿರುದ್ಧ ೧೭೧ ಪ್ರಕರಣಗಳು ಇದೆ. ಸಂವಿಧಾನ ವಿರೋಧಿಸಿ RSS ನವರು ನಮಗೆ ಪಾಠ ಹೇಳಲು ಬರುತ್ತಾರೆ. ನಿಗಮಕ್ಕೆ ಮೀಸಲಿಟ್ಟ ಹಣ ಕದಿಯಲು ಬಿಡಲ್ಲ. ಕಳ್ಳತನ ಮಾಡರುವ ಕಳ್ಳರನ್ನು ಸಹ ಬಿಡುವುದಿಲ್ಲ. ವಾಲ್ಮೀಕಿ ನಿಗಮ ಹಗರಣದಲ್ಲಿ ಹಣಕಾಸು ಇಲಾಖೆಯ ಪಾತ್ರ ಇಲ್ಲ ಎಂದು ಸಷ್ಟನೆ ನೀಡಿದರು.
ಜೊತೆಗೆ ಎಸ್ ಐಟಿಯಿಂದ ನ್ಯಾಯಯುತ ತನಿಖೆ ಮಾಡಿಸಿದ್ದೇವೆ. ಕೇಂದ್ರದ ಕೆಳಗೆ ಬರುವುದರಿಂದ ಸಿಬಿಐ ಕೇಳುತ್ತಿದ್ದಾರೆ. ಯಾವ ಹಗರಣದ ಬಗ್ಗೆ ಇಡಿ ಬಂದಿರಲಿಲ್ಲ. ವಾಲ್ಮೀಕಿ ನಿಗಮದಲ್ಲಿ ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಹೇಳಿದರು.
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…