ಬೆಳಗಾವಿ: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಹಾಗೂ ಕಲ್ಲಿನಿಂದ ದಾಳಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುನಿರತ್ನ ಅವರ ಮೇಲೆ ಯಾರು ದಾಳಿ ನಡೆಸಿದ್ದಾರೋ ಗೊತ್ತಿಲ್ಲ. ಮುನಿರತ್ನ ಮೇಲೆ ಮೊಟ್ಟೆ ಎಸೆದಿದ್ದಾರೆ ಎನ್ನುವುದು ನನಗೂ ಗೊತ್ತಿದೆ. ಆದರೆ ಯಾರು ಎಸೆದಿದ್ದು ಎನ್ನುವುದು ಇನ್ನೂ ಗೊತ್ತಾಗಿಲ್ಲ. ಇಬ್ಬರು ಮೊಟ್ಟೆ ಎಸೆದಿರುವ ಬಗ್ಗೆ ಮಾಹಿತಿಯಿದೆ. ಅವರು ನಮ್ಮ ಪಕ್ಷಕ್ಕೆ ಸೇರಿದ್ದಾರಾ ಅಥವಾ ಬೇರೆಯವರ ಎನ್ನುವುದು ಇನ್ನು ಗೊತ್ತಾಗಿಲ್ಲ ಎಂದರು.
ಇನ್ನು ವಾಜಪೇಯಿಯವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮುನಿರತ್ನ ಭಾಗವಹಿಸಿ ವಾಪಸ್ ಆಗುತ್ತಿದ್ದಾಗ ಕಲ್ಲು ಮತ್ತು ಮೊಟ್ಟೆಯಿಂದ ದಾಳಿಯಾಗಿತ್ತು. ಮುನಿರತ್ನ ಮೇಲೆ ದಾಳಿ ಮಾಡಿದವರು ಕಾಂಗ್ರೆಸ್ ಕಾರ್ಯಕರ್ತರು ಎಂದು ಹೇಳಲಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಘಟನೆ ನಡೆಯುತ್ತಿದ್ದಂತೆ ಶಾಸಕ ಮುನಿರತ್ನ ಅವರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದರು. ನನ್ನ ಕೊಲೆಯ ಹಿಂದೆ ಮೂವರ ಕುಮ್ಮಕ್ಕಿದೆ. ಡಿಸಿಎಂ ಡಿಕೆಶಿ, ಸಹೋದರ ಡಿ.ಕೆ.ಸುರೇಶ್, ಕುಸುಮಾ ಅವರೇ ಇಂದಿನ ದಾಳಿಗೆ ಕಾರಣ ಎಂದು ನೇರ ಆರೋಪ ಮಾಡಿದ್ದರು.