ದಾವಣಗೆರೆ: ಜಗದ್ಗುರು ಶ್ರೀ ಡಾ: ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳ ಪಟ್ಟಾಭಿಷೇಕ ರಜತ ಮಹೋತ್ಸವ ಮತ್ತು ರಾಷ್ಟ್ರೀಯ ಭಗೀರಥ ಮಹೋತ್ಸವ ಹಾಗೂ ಉಪ್ಪಾರರ ಬೃಹತ್ ಸಮಾವೇಶವನ್ನು ಉದ್ಘಾಟನೆ ಕಾರ್ಯಕ್ರಮಕ್ಕೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಮಾತನಾಡಿದರು. ಪಂಚ ಗ್ಯಾರಂಟಿಗಳು ಸ್ಥಗಿತಗೊಳ್ಳಲಿವೆ ಎಂಬುದರ ಕುರಿತು ಚರ್ಚೆಗಳು ಏರ್ಪಟ್ಟಿದ್ದು, ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ತಳಮಟ್ಟದ ಜನರಿಗೆ ಉಪಯೋಗವಾಗುವ ಗ್ಯಾರಂಟಿ ಯೋಜನೆಗಳನ್ನು ಕೆಲವರು ಟೀಕಿಸಿದರು. ಆದರೆ ರಾಜ್ಯದ 150 ಕೋಟಿ ಮಹಿಳೆಯರು ಜೂನ್ 11 ರಿಂದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇಂತಹ ಜನಪರ ಯೋಜನೆಗಳ ಬಗ್ಗೆ ಇಚ್ಛಾಶಕ್ತಿ ತೋರದ ಪಕ್ಷಗಳು, ಮೊದಲಿಗೆ ಯೋಜನೆಗಳನ್ನು ಜಾರಿ ಮಾಡಿ ನಂತರ ಸ್ಥಗಿತಗೊಳಿಸುತ್ತಾರೆ ಎಂದು ಟೀಕಿಸುತ್ತಾರೆ. ಆದರೆ ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯದ 4.5 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ ಎಂದೂ ಸಹ ಮಾಹಿತಿ ನೀಡಿದರು.





