Mysore
29
few clouds

Social Media

ಬುಧವಾರ, 18 ಫೆಬ್ರವರಿ 2026
Light
Dark

ಸಿದ್ದರಾಮಯ್ಯರಿಗೆ ಸಿಎಂ ಸ್ಥಾನದಲ್ಲಿ ಉಳಿಯುವ ನೈತಿಕತೆಯಿಲ್ಲ: ವಿಪಕ್ಷ ನಾಯಕ ಆರ್.ಅಶೋಕ್‌

ಬೆಂಗಳೂರು: ಸಿದ್ದರಾಮಯ್ಯರಿಗೆ ಸಿಎಂ ಸ್ಥಾನದಲ್ಲಿ ಉಳಿಯುವ ನೈತಿಕತೆಯಿಲ್ಲ. ಕೂಡಲೇ ಅವರು ರಾಜೀನಾಮೆ ನೀಡಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್‌ ಮೈಸೂರು ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ಸಿಎಂ ಸಿದ್ದರಾಮಯ್ಯ ಮೈಸೂರು ಮುಡಾದಲ್ಲಿ 14 ಸೈಟ್‌ಗಳನ್ನು ಕೊಳ್ಳೆ ಹೊಡೆದಿದ್ದಾರೆ. ಸಿದ್ದರಾಮಯ್ಯ ದಲಿತರ ಜಮೀನಿನ ನಿವೇಶನಗಳನ್ನು ಪಡೆದಿದ್ದಾರೆ ಎಂದು ಸಿದ್ದು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ, ಸರ್ಕಾರದ ಸಚಿವರು ಹಾಗೂ ಕಾಂಗ್ರೆಸ್‌ ಶಾಸಕರುಗಳೆಲ್ಲಾ, ರಾಜ್ಯಪಾಲರ ನೋಟಿಸ್‌ ವಿರುದ್ಧ ಕಿಡಿಕಾರಿದ್ದಾರೆ. ಸಿದ್ದರಾಮಯ್ಯರಿಗೆ ನೋಟಿಸ್‌ ನೀಡಿದ ರಾಜ್ಯಪಾಲರನ್ನೇ ಪ್ರಶ್ನಿಸಿದ್ದಾರೆ. ಕೇವಲ ನೋಟಿಸ್‌ಗೆ ಗಢ ಗಢ ಎನ್ನುತ್ತಿದ್ದಾರೆ. ಕಾಂಗ್ರೆಸ್‌ ಈಗ ಒಡೆದ ಮನೆಯಾಗಿದೆ ಎಂದು ಲೇವಡಿ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ನಾವೆಲ್ಲಾ ಹೋರಾಡುತ್ತಿದ್ದೇವೆ. ಸದನದಲ್ಲಿ ಮುಡಾ ಅಕ್ರಮದ ಬಗ್ಗೆ ಮಾತನಾಡಲು ಅವಕಾಶ ನೀಡಿಲ್ಲ. ಅದಕ್ಕಾಗಿಯೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ ಎಂದರು.

ಇನ್ನೂ ಇಷ್ಟೆಲ್ಲಾ ಘಟನೆಗಳು ಆದ ಮೇಲೆ ಸಿಎಂ ಸ್ಥಾನದಲ್ಲಿ ಕೂರಲು ಸಿದ್ದರಾಮಯ್ಯರಿಗೆ ಯಾವುದೇ ನೈತಿಕತೆಯಿಲ್ಲ. ಹಾಗಾಗಿ ಕೂಡಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

 

 

Tags:
error: Content is protected !!