ಬೆಂಗಳೂರು: ಸಿದ್ದರಾಮಯ್ಯರಿಗೆ ಸಿಎಂ ಸ್ಥಾನದಲ್ಲಿ ಉಳಿಯುವ ನೈತಿಕತೆಯಿಲ್ಲ. ಕೂಡಲೇ ಅವರು ರಾಜೀನಾಮೆ ನೀಡಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ಮೈಸೂರು ಪಾದಯಾತ್ರೆ ಹಮ್ಮಿಕೊಂಡಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಸಿಎಂ ಸಿದ್ದರಾಮಯ್ಯ ಮೈಸೂರು ಮುಡಾದಲ್ಲಿ 14 ಸೈಟ್‌ಗಳನ್ನು ಕೊಳ್ಳೆ ಹೊಡೆದಿದ್ದಾರೆ. ಸಿದ್ದರಾಮಯ್ಯ ದಲಿತರ ಜಮೀನಿನ ನಿವೇಶನಗಳನ್ನು ಪಡೆದಿದ್ದಾರೆ ಎಂದು ಸಿದ್ದು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ, ಸರ್ಕಾರದ ಸಚಿವರು ಹಾಗೂ ಕಾಂಗ್ರೆಸ್ ಶಾಸಕರುಗಳೆಲ್ಲಾ, ರಾಜ್ಯಪಾಲರ ನೋಟಿಸ್ ವಿರುದ್ಧ ಕಿಡಿಕಾರಿದ್ದಾರೆ. ಸಿದ್ದರಾಮಯ್ಯರಿಗೆ ನೋಟಿಸ್ ನೀಡಿದ ರಾಜ್ಯಪಾಲರನ್ನೇ ಪ್ರಶ್ನಿಸಿದ್ದಾರೆ. ಕೇವಲ ನೋಟಿಸ್‌ಗೆ ಗಢ ಗಢ ಎನ್ನುತ್ತಿದ್ದಾರೆ. ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ ಎಂದು ಲೇವಡಿ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ನಾವೆಲ್ಲಾ ಹೋರಾಡುತ್ತಿದ್ದೇವೆ. ಸದನದಲ್ಲಿ ಮುಡಾ ಅಕ್ರಮದ ಬಗ್ಗೆ ಮಾತನಾಡಲು ಅವಕಾಶ ನೀಡಿಲ್ಲ. ಅದಕ್ಕಾಗಿಯೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ ಎಂದರು.
ಇನ್ನೂ ಇಷ್ಟೆಲ್ಲಾ ಘಟನೆಗಳು ಆದ ಮೇಲೆ ಸಿಎಂ ಸ್ಥಾನದಲ್ಲಿ ಕೂರಲು ಸಿದ್ದರಾಮಯ್ಯರಿಗೆ ಯಾವುದೇ ನೈತಿಕತೆಯಿಲ್ಲ. ಹಾಗಾಗಿ ಕೂಡಲೇ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…