Mysore
23
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಬಾಬು ಜಗಜೀವನ್‌ ರಾಮ್‌ರವರು ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಾಬು ಜಗಜೀವನ್ ರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದ ಆವರಣದಲ್ಲಿರುವ ವಿಧಾನಸೌಧದ ಆವರಣದಲ್ಲಿ ಇಂದು(ಏಪ್ರಿಲ್‌.5) ಬಾಬು ಜಗಜೀವನ್ ರಾಮ್ ಅವರ ಜಯಂತಿ ಅಂಗವಾಗಿ ಬಾಬೂಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಬು ಜಗಜೀವನ್ ರಾಮ್ ಅವರು ದೇಶ ಕಂಡ ಮುತ್ಸದ್ದಿ ನಾಯಕರು. ದೀರ್ಘ ಕಾಲ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಅನೇಕ ಇಲಾಖೆಗಳನ್ನು ನಿಭಾಯಿಸಿದರು ಎಂದರು.

ಕೃಷಿ, ರಕ್ಷಣೆ ಸೇರಿದಂತೆ ಯಾವುದೇ ಇಲಾಖೆಯಲ್ಲಿದ್ದರೂ ಎಲ್ಲಾ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು. ಅವರು ನಮ್ಮೊಂದಿಗೆ ಇಲ್ಲದಿದ್ದರೂ, ಹೆಜ್ಜೆಗುರುತುಗಳನ್ನು ಬಿಟ್ಟುಹೋಗಿದ್ದಾರೆ. “ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿ, ಅದರ ಉದ್ಧಾರದಲ್ಲೇ ನಮ್ಮ ಉದ್ಧಾರ ಹಾಗೂ ಅದರ ವಿಮೋಚನೆಯಲ್ಲೇ ನಮ್ಮ ವಿಮೋಚನೆಯಿದೆ” ಎಂದು ನುಡಿದ ಅವರು ಅಪ್ರತಿಮ ದೇಶಭಕ್ತರೂ ಆಗಿದ್ದರು. ದೇಶಕ್ಕೆ ಮಾದರಿ ಎನ್ನುವ ನಾಯಕರು. ಅವರ ಜಯಂತಿಯಂದು ಗೌರವ ನಮನ ಸಲ್ಲಿಸುತ್ತೇನೆ ಎಂದು ಹೇಳಿದರು.

 

Tags:
error: Content is protected !!