ಬೆಂಗಳೂರು: ಬಾಬು ಜಗಜೀವನ್ ರಾಮ್ ಅವರು ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಎಲ್ಲಾ ಶೋಷಿತ ವರ್ಗಕ್ಕೆ ಸಾಮಾಜಿಕ ನ್ಯಾಯ ದೊರಕಿಸಲು ಶ್ರಮಿಸಿದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಆವರಣದಲ್ಲಿರುವ ವಿಧಾನಸೌಧದ ಆವರಣದಲ್ಲಿ ಇಂದು(ಏಪ್ರಿಲ್.5) ಬಾಬು ಜಗಜೀವನ್ ರಾಮ್ ಅವರ ಜಯಂತಿ ಅಂಗವಾಗಿ ಬಾಬೂಜಿಯವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಬು ಜಗಜೀವನ್ ರಾಮ್ ಅವರು ದೇಶ ಕಂಡ ಮುತ್ಸದ್ದಿ ನಾಯಕರು. ದೀರ್ಘ ಕಾಲ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಅನೇಕ ಇಲಾಖೆಗಳನ್ನು ನಿಭಾಯಿಸಿದರು ಎಂದರು.
ಕೃಷಿ, ರಕ್ಷಣೆ ಸೇರಿದಂತೆ ಯಾವುದೇ ಇಲಾಖೆಯಲ್ಲಿದ್ದರೂ ಎಲ್ಲಾ ಇಲಾಖೆಗಳಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸಿದರು. ಅವರು ನಮ್ಮೊಂದಿಗೆ ಇಲ್ಲದಿದ್ದರೂ, ಹೆಜ್ಜೆಗುರುತುಗಳನ್ನು ಬಿಟ್ಟುಹೋಗಿದ್ದಾರೆ. “ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿ, ಅದರ ಉದ್ಧಾರದಲ್ಲೇ ನಮ್ಮ ಉದ್ಧಾರ ಹಾಗೂ ಅದರ ವಿಮೋಚನೆಯಲ್ಲೇ ನಮ್ಮ ವಿಮೋಚನೆಯಿದೆ” ಎಂದು ನುಡಿದ ಅವರು ಅಪ್ರತಿಮ ದೇಶಭಕ್ತರೂ ಆಗಿದ್ದರು. ದೇಶಕ್ಕೆ ಮಾದರಿ ಎನ್ನುವ ನಾಯಕರು. ಅವರ ಜಯಂತಿಯಂದು ಗೌರವ ನಮನ ಸಲ್ಲಿಸುತ್ತೇನೆ ಎಂದು ಹೇಳಿದರು.
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…
ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ…
ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ ಹಬ್ಬಕ್ಕೆ ಅಗತ್ಯ ಸಿದ್ಧತೆ ವಿರಾಜಪೇಟೆ: ಕೇರಳ ಹಾಗೂ…
ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು…
‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ…