ರಾಜ್ಯ

ಬಸವಣ್ಣನವರ ವಿಚಾರ, ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ. ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೆ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾವೇರಿ ನಿವಾಸದಲ್ಲಿ ಇಂದು(ಫೆಬ್ರವರಿ.24) ಲಿಂಗಾಯತ ಸ್ವಾಮೀಜಿಗಳು, ಸಚಿವರು, ಶಾಸಕರು, ಸಮಾಜದ ಮುಖಂಡರ ನಿಯೋಗದವರು ಅವರನ್ನು ಭೇಟಿಯಾಗಿ, ಸಮುದಾಯದ ಬೇಡಿಕೆಗಳ ಕುರಿತು ಸಮಾಲೋಚನೆ ನಡೆಸಿ, ಮನವಿಪತ್ರ ನೀಡಿದ ವೇಳೆ ಮಾತನಾಡಿದ್ದಾರೆ.

ಬಸವ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟದ ಬಗ್ಗೆ ನಮ್ಮ ಸರ್ಕಾರಕ್ಕೆ ಪೂರ್ಣ ಬದ್ಧತೆ ಇದ್ದು, ಪೂಜ್ಯರ ಬೇಡಿಕೆಗಳಲ್ಲಿ ಸಾಧ್ಯವಿರುವವುಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ಮೊದಲ ಬಾರಿ ಮುಖ್ಯಮಂತ್ರಿ ಆದಾಗ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದೆ. ಬಸವಣ್ಣನವರ ಭಾವಚಿತ್ರ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದ್ದು ನಮ್ಮ ಸರ್ಕಾರ ಆಗಿದೆ ಎಂದು ಹೇಳಿದ್ದಾರೆ.

ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ. ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ. ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನವರನ್ನು ವಿರೋಧಿಸಲು ಸಾಧ್ಯವಿಲ್ಲ. ಅದಕ್ಕೆ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ. ಜಾತಿ ವ್ಯವಸ್ಥೆ ಬಹಳ ಗಟ್ಟಿಯಾಗಿ ಬೇರೂರಿದೆ. ಇದಕ್ಕೆ ಪಟ್ಟಭದ್ರರು ನೀರು, ಗೊಬ್ಬರ ಹಾಕುತ್ತಿದ್ದಾರೆ. ಜಾತ್ಯತೀತ, ಸಮಸಮಾಜ ನಿರ್ಮಾಣ ಮಾಡಲು ಬಸವಣ್ಣನವರ ಹೋರಾಟ ನಮಗೆ ಪೂರಕ ಎಂದಿದ್ದಾರೆ.

ಗೋರುಚ ಅವರ ಅಧ್ಯಕ್ಷತೆಯಲ್ಲಿ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿದ್ದು ನಾವು. ಅನುಭವ ಮಂಟಪವು ಮೊದಲ ಪ್ರಜಾಪ್ರಭುತ್ವದ ವೇದಿಕೆಯಾಗಿತ್ತು. ಯಾರ ಒತ್ತಾಯವೂ ಇಲ್ಲದ ವೇಳೆಯಲ್ಲೇ ನಮ್ಮ ಸರ್ಕಾರ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿತ್ತು. ಅಲ್ಲದೇ ನಮ್ಮ ಕಾಂಗ್ರೆಸ್ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿತು ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

8 mins ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

10 mins ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

11 mins ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

12 mins ago

ಬೂದಿಪಡಗ ಆನೆ ಶಿಬಿರದಿಂದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…

18 mins ago

ಡಿಜಿಟಲ್‌ ಪಾವತಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಆರ್‌ಬಿಐ

ನವದೆಹಲಿ: ಡಿಜಿಟಲ್‌ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಹಾಗೂ ವಂಚನೆಗಳನ್ನು ತಡೆಯುವ ಉದ್ದೇಸದಿಂದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಹೊಸ ಮಾರ್ಗಸೂಚಿ…

27 mins ago