ರಾಜ್ಯ

ಬಿಜೆಪಿ ಸುಳ್ಳುಗಳ ಆಧಾರದಲ್ಲೇ ದೇಶವನ್ನು ಆಳುವ ಸರ್ಕಸ್ ಮಾಡುತ್ತಿದೆ: ಸಿಎಂ

ಚಿಕ್ಕಮಗಳೂರು : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ನಾಲ್ಕೂವರೆ ಕೋಟಿ ಫಲಾನುಭವಿಗಳಿಗೆ ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಒಂದು ಕಡೆ ಅವಮಾನಿಸುತ್ತಲೇ ಮತ್ತೊಂದು ಕಡೆ ವಿಪರೀತ ಸುಳ್ಳುಗಳನ್ನು ಹೇಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.‌

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಮತ್ತು ನಾನಾ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿ ಬೆಂಬಲಿಗರು ಇಲ್ಲವೇ ಸಿ.ಟಿ.ರವಿ? ಈ ಪ್ರಶ್ನೆಗೆ ಬಹಿರಂಗವಾಗಿ ಉತ್ತರಿಸಲು ಬಿಜೆಪಿಗೆ ಸವಾಲು ಹಾಕಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳು ರಾಜ್ಯದ ಜನರು ಹಕ್ಕು. ಫಲಾನುಭವಿಗಳನ್ನು ಅವಮಾನಿಸುವುದನ್ನು ತಕ್ಷಣ ನಿಲ್ಲಿಸಿ ಎಂದು ಎಚ್ಚರಿಸಿದರು.

ಐದಕ್ಕೆ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲಿಸಿದ ಜಿಲ್ಲೆಯ ಜನತೆಯ ಸಮಯಪ್ರಜ್ಞೆ ಮತ್ತು ರಾಜಕೀಯ ಪ್ರಜ್ಞೆಗೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು, ನಿಮಗೆ ಬಿಜೆಪಿ ಸರ್ಕಾರದ ಅಚ್ಛೆ ದಿನಗಳು ಬಂದಿದೆಯಾ ಎಂದು ಪ್ರಶ್ನಿಸಿದರು. ನೆರೆದಿದ್ದ ಜನರು ಇಲ್ಲ ಇಲ್ಲ ಎಂದು ಕೂಗಿದರು.

ಅಭಿವೃದ್ಧಿ ಶೂನ್ಯ ಬಿಜೆಪಿ ಸುಳ್ಳುಗಳ ಉತ್ಪಾದನೆ ಮಾಡುತ್ತಿದೆ. ಸುಳ್ಳುಗಳ ಆಧಾರದಲ್ಲೇ ದೇಶವನ್ನು ಆಳುವ ಸರ್ಕಸ್ ಮಾಡುತ್ತಿದೆ. ಬಿಜೆಪಿ ಯಾವಾಗಲೂ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ. ಆದರೆ, ಕಾಂಗ್ರೆಸ್, ಹಸಿವು ಮುಕ್ತ ಭಾರತ ನಿರ್ಮಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. ನೀವು ಸ್ವತಂತ್ರ ಭಾರತದ ಇತಿಹಾಸ ನೋಡಿದರೆ ಹಸಿವು ಮುಕ್ತ ಭಾರತಕ್ಕಾಗಿ ಕಾಂಗ್ರೆಸ್ ಏನೆಲ್ಲಾ ಕಾರ್ಯಕ್ರಮಗಳನ್ನು ಜಾರಿ ಮಾಡಿತು ಎನ್ನುವ ಪಟ್ಟಿಯೇ ಸಿಗುತ್ತದೆ ಎಂದರು.

ಕುವೆಂಪು ಅವರ ಸರ್ವೋದಯವಾಗಲಿ ಸರ್ವರಲಿ ಎನ್ನುವ ಮೌಲ್ಯವನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು ಸರ್ವರ ಉದಯಕ್ಕಾಗಿನೇ ಕಾಂಗ್ರೆಸ್ ಶ್ರಮಿಸುತ್ತಿದೆ. ಗ್ಯಾರಂಟಿ ಕಾರ್ಯಕ್ರಮಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ನಾಲ್ಕೂವರೆ ಕೋಟಿ ಜನರ ಮನೆ ಬಾಗಿಲು ಬಡಿದಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.

ಬಿಜೆಪಿ ರಾಜ್ಯದ ಜನರ ಬದುಕನ್ನು ಪಕ್ಕಕ್ಕಿಟ್ಟು ಕೇವಲ ಭಾವನೆಗಳನ್ನು ಕೆರಳಿಸುತ್ತದೆ. ಇದುವರೆಗೂ ರಾಜ್ಯದಲ್ಲಿ ಬಿಜೆಪಿ ಒಂದು ಭಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದರೇ ಹೊರತು ಸ್ವಂತ ಶಕ್ತಿ ಮೇಲೆ ಅಧಿಕಾರ ನಡೆಸಿಯೇ ಇಲ್ಲ. ನಾವು 2013 , 2023 ಎರಡೂ ಬಾರಿಯೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ದೇವೆ ಎನ್ನುತ್ತಾ, ಅಲ್ವಾ ತಮ್ಮಯ್ಯ ಎಂದು ಚಿಕ್ಕಮಗಳೂರು ಶಾಸಕರನ್ನು ಪ್ರಶ್ನಿಸಿ ಬಿಜೆಪಿಗೆ ತಿವಿದರು.

4 ಕೋಟಿ 64 ಲಕ್ಷ ಜನರಿಗೆ ನಮ್ಮ ಗ್ಯಾರಂಟಿಗಳು ತಲುಪಿ ಅವರಿಗೆ ಸ್ವಲ್ಪ ಸಮಾಧಾನ ತಂದಿದೆ. ಅವರ ಜೇಬಿಗೆ ನೇರವಾಗಿ ನಾವು ಹಣ ಹಾಕುತ್ತಿರುವುದರಿಂದ ನಮ್ಮ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಇದರ ಪರಿಣಾಮ ರಾಜ್ಯದ ಆರ್ಥಿಕತೆಗೆ ಬಡವರು ಶಕ್ತಿ ತುಂಬಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವೆ ಮೋಟಮ್ಮ, ಜಿಲ್ಲೆಯ ಶಾಸಕರುಗಳಾದ ನಯನ ಮೋಟಮ್ಮ, ಆನಂದ್ ಕುಮಾರ್, ರಾಜುಗೌಡ, ಶ್ರೀನಿವಾಸ್, ತಮಯ್ಯ ಗೌಡ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ನಾಯಕರು ಉಪಸ್ಥಿತರಿದ್ದರು.

andolana

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

4 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

5 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

5 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

5 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

6 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

6 hours ago