ಬೆಳಗಾವಿ: ಗಾಂಧೀಜಿಯವರು ಹೇಳಿದ ಹಿಂದುತ್ವದ ದ್ವೇಷಿಯಾಗಿರುವ ಮತ್ತು ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ ಮತ್ತು ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿಯಲ್ಲಿ ಇಂದು(ಜನವರಿ.21) ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಸುವರ್ಣಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ರಾಮ ಭಕ್ತರಾಗಿದ್ದ, ಶುದ್ಧಆತ್ಮದ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು ಬಿಜೆಪಿ ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದುತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಆದರೆ ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಹೇಳಿದರು.
ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ ಹಾಗೂ ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ. ಅಲ್ಲದೇ ಮಹಾತ್ಮಗಾಂಧೀಜಿ ಅವರು ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ಆ ದಿನವೇ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದರು.
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…
ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…
ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…
ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…