ರಾಜ್ಯ

ಬಿಜೆಪಿ ಜನಾಕ್ರೋಶ ಯಾತ್ರೆ| ವಿಜಯೇಂದ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಯಾತ್ರೆ ಕೈಗೊಂಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹೈಕಮಾಂಡ್ ಯತ್ನಾಳ್ ಅವರನ್ನು ಪಕ್ಷದಿಂದ ಹೊರಗೆ ಹಾಕಿ, ಅವರಿಂದ ಈಗ ಇನ್ನಷ್ಟು ಆರೋಪಗಳನ್ನು ಮಾಡಿಸುತ್ತಿದ್ದು, ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸುವುದೇ ಬಿಜೆಪಿ ಹೈಕಮಾಂಡ್ ಉದ್ದೇಶವಾಗಿದೆ. ಹಾಗಾಗಿ ವಿಜಯೇಂದ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆಯೇ ಹೊರತು ಬೇರೆ ಯಾವ ಸಾರ್ವಜನಿಕ ಹಿತಾಸಕ್ತಿಯ ಸದುದ್ದೇಶ ಖಂಡಿತ ಈ ಯಾತ್ರೆಗೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಜನಾಕ್ರೋಶ ಯಾತ್ರೆ ಕೈಗೊಂಡಿರುವ ರಾಜ್ಯ ಬಿಜೆಪಿ ನಾಯಕರಿಗೆ ನಾನು ಶುಭ ಕೋರುತ್ತೇನೆ. ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ ಮನೆಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು ಈ ಯಾತ್ರೆ ನೆರವಾಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ ಎಂದು ವ್ಯಂಗ್ಯ ಮಾಡಿದ್ದಾರೆ.

ಇಷ್ಟೊಂದು ಅಸಮರ್ಥ, ನಿರ್ಲಜ್ಜ ಮತ್ತು ಜನವಿರೋಧಿ ವಿರೋಧ ಪಕ್ಷವನ್ನು ರಾಜ್ಯ ಎಂದೂ ಕಂಡಿಲ್ಲ. ಸ್ವಪಕ್ಷೀಯರೇ ಆರೋಪಿಸುವಂತೆ ‘’ಪೇಮೆಂಟ್ ಸೀಟ್’’ ನಲ್ಲಿ ಕೂತಿರುವ ರಾಜ್ಯ ಬಿಜೆಪಿಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ? ನಮ್ಮನ್ನು ಪ್ರಶ್ನಿಸುವ ಮೊದಲು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತು ಅವರ ಶಾಸಕ ಮಿತ್ರರು ಕಳೆದೆ ಎರಡು ವರ್ಷಗಳಿಂದ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ದಮ್ಮು ತಾಕತ್ ತೋರಿಸಲಿ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿಜಯೇಂದ್ರ ವಿರುದ್ಧ ಸ್ವಪಕ್ಷೀಯರು ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳು ಅವರ ಪಕ್ಷದ ಹೈಕಮಾಂಡಿಗೂ ಮನವರಿಕೆಯಾದಂತಿದೆ. ಪಕ್ಷದೊಳಗಿದ್ದು ಮಾಡುವ ಆರೋಪಗಳಿಂದ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರನ್ನು ಪಕ್ಷದಿಂದ ಹೊರಗೆ ಹಾಕಿ, ಅವರಿಂದ ಈಗ ಇನ್ನಷ್ಟು ಆರೋಪಗಳನ್ನು ಮಾಡಿಸುತ್ತಿದೆ. ಅಂತಿಮವಾಗಿ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸುವುದೇ ಬಿಜೆಪಿ ಹೈಕಮಾಂಡ್ ಉದ್ದೇಶವಾಗಿದೆ ಎಂದಿದ್ದಾರೆ.

ಇದಕ್ಕಾಗಿ ವಿಜಯೇಂದ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆಯೇ ಹೊರತು ಬೇರೆ ಯಾವ ಸಾರ್ವಜನಿಕ ಹಿತಾಸಕ್ತಿಯ ಸದುದ್ದೇಶ ಖಂಡಿತ ಈ ಯಾತ್ರೆಗೆ ಇಲ್ಲ. ವಿಜಯೇಂದ್ರ ಅವರು ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರದ್ದು ಮಾತ್ರವಲ್ಲ ರಾಜ್ಯದ ಜನತೆಯ ವಿಶ್ವಾಸವನ್ನೂ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಜೆಟ್‌ನ 51,000 ಕೋಟಿ ರೂಪಾಯಿ ಹಣ ನೇರವಾಗಿ ಫಲಾನುಭವಿಗಳನ್ನು ತಲುಪುತ್ತಿದ್ದು, ಅವರೆಲ್ಲರೂ ಸಂತುಷ್ಠರಾಗಿದ್ದಾರೆ. ಈಗ ಅವರು ಬೀದಿಗೆ ಬಂದು ನಮ್ಮ ಪರ ಘೋಷಣೆ ಹಾಕದೆ ಇರಬಹುದು, ಆದರೆ ಅವರೆಲ್ಲರ ಆಶೀರ್ವಾದ ನಮ್ಮ ಸರ್ಕಾರದ ಪರವಾಗಿದೆ. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಬಂದಿರುವ ಭಾರತೀಯ ಜನತಾ ಪಕ್ಷದ ಬಡವರು ಮತ್ತು ಮಹಿಳಾ ವಿರೋಧಿ ಧೋರಣೆಯನ್ನು ಅರ್ಥಮಾಡಿಕೊಳ್ಳುವಷ್ಟು ಜನ ಪ್ರಜ್ಞಾವಂತರಾಗಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ವಿಫಲಗೊಳಿಸುವ ಏಕೈಕ ಉದ್ದೇಶದಿಂದ ರಾಜ್ಯದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಜೊತೆ ಷಾಮೀಲಾಗಿ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ತೆರಿಗೆ ಪಾಲು ಮತ್ತು ಅನುದಾನಕ್ಕೆ ಕತ್ತರಿ ಹಾಕಿಸಿದ್ದಾರೆ. ರಾಜ್ಯದ ಜನ ತಮ್ಮ ಬೆವರಿನ ಗಳಿಕೆಯಿಂದ ನೀಡುತ್ತಿರುವ ಐದು ಲಕ್ಷ ಕೋಟಿ ರೂಪಾಯಿಗಳಷ್ಟು ತೆರಿಗೆ ಹಣದಲ್ಲಿ ಕೇವಲ 60,000 ಕೋಟಿ ರೂಪಾಯಿ ಮಾತ್ರ ವಾಪಸು ನೀಡುತ್ತಿರುವ ಅನ್ಯಾಯದ ಬಗ್ಗೆ ಆಕ್ರೋಶಗೊಂಡಿದ್ದಾರೆ. ಬಿಜೆಪಿ ಪಕ್ಷದ ಯಾತ್ರೆಯ ಸಮಯದಲ್ಲಿ ಈ ಆಕ್ರೋಶದ ಬಿಸಿ ಕೂಡಾ ಬಿಜೆಪಿ ನಾಯಕರಿಗೆ ತಟ್ಟಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದ ಜನರ ಹಿತರಕ್ಷಣೆಯ ಕಿಂಚಿತ್ತಾದರೂ ಕಾಳಜಿ ಈ ಬಿಜೆಪಿ ನಾಯಕರಿಗೆ ಇರುವುದಾದರೆ ಮೊದಲು ಇವರು ಪ್ರಧಾನಮಂತ್ರಿ ನಿವಾಸದ ಎದುರು ಹೋಗಿ ಪ್ರತಿಭಟನೆ ನಡೆಸಬೇಕು. ಕರ್ನಾಟಕವನ್ನು ಶತ್ರುರಾಜ್ಯದಂತೆ ನೋಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ತೆರಿಗೆ ಪಾಲು, ಅನುದಾನ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿರುವುದು ಮಾತ್ರವಲ್ಲ ಈಗ ಕೇಂದ್ರದಲ್ಲಿ ಕರ್ನಾಟಕದ ದನಿಯನ್ನು ಕುಗ್ಗಿಸಬೇಕೆಂಬ ದುಷ್ಟ ಉದ್ದೇಶದಿಂದ ಕ್ಷೇತ್ರ ಮರುವಿಂಗಡಣೆಯನ್ನು ಮಾಡಲು ಹೊರಟಿದೆ. ಇದರ ವಿರುದ್ಧ ದನಿ ಎತ್ತಬೇಕಾಗಿರುವ ರಾಜ್ಯದಿಂದ ಆರಿಸಿಹೋಗಿರುವ ಬಿಜೆಪಿ ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೇಂದ್ರದ ಗುಲಾಮರಂತೆ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ವೈಯಕ್ತಿಕವಾಗಿ ನಾನು ರಾಜ್ಯದಲ್ಲಿ ರಚನಾತ್ಮಕವಾಗಿ ಕಾರ್ಯನಿರ್ವಹಿಸುವ ಸಮರ್ಥ ವಿರೋಧ ಪಕ್ಷ ಇರಬೇಕೆಂದು ಬಯಸುವವನು. ಬಿಜೆಪಿಯವರಂತೆ ರಾಜ್ಯ ಬಿಜೆಪಿ ಮುಕ್ತ ಆಗಬೇಕೆಂದು ಬಯಸುವಷ್ಟು ಕೆಟ್ಟ ಮನಸ್ಸು ನನಗಿಲ್ಲ. ನಮ್ಮ ಆಡಳಿತದಲ್ಲಿ ತಿಳಿದೋ, ತಿಳಿಯದೆಯೋ ತಪ್ಪುಗಳಾಗಿದ್ದರೆ ಅದನ್ನು ನಮ್ಮ ಗಮನಕ್ಕೆ ತರುವುದು ವಿರೋಧ ಪಕ್ಷದ ಮುಖ್ಯ ಕರ್ತವ್ಯವಾಗಿದೆ. ಆದರೆ ರಾಜ್ಯದಲ್ಲಿರುವ ವಿರೋಧ ಪಕ್ಷ ತನ್ನ ಒಳಜಗಳ ಮತ್ತು ಅಸಾಮರ್ಥ್ಯದಿಂದ ರಾಜ್ಯದ ಜನತೆ ಎದುರು ನಗೆಪಾಟಲಿಗೀಡಾಗಿದೆ ಎಂದು ವ್ಯಂಗ್ಯ ಮಾಡಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಚಾ.ನಗರ | ಬೇಡರಪುರದಲ್ಲಿ ಮತ್ತೊಂದು ಚಿರತೆ ಸೆರೆ

ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…

7 hours ago

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸಿ : ಡಿಸಿ, ಸಿಇಓಗಳಿಗೆ ಮಧು ಬಂಗಾರಪ್ಪ ಸೂಚನೆ

ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…

8 hours ago

ಕಾರು-ಬೈಕ್‌ ನಡುರೆ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…

8 hours ago

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೂರೈಕೆಯಲ್ಲಿ ಶೇ20 ರಷ್ಟು ಹೆಚ್ಚಳ

ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…

8 hours ago

ಇರಾನ್‌ ಡ್ರೋನ್‌ ಉತ್ಪಾದನಾ ಘಟಕದ ಮೇಲೆ ಅಮೆರಿಕ ದಾಳಿ : ಚಿತ್ರ ಬಿಡುಗಡೆ

ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…

9 hours ago

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

9 hours ago