ಹಾಸನ: ಉಪಚುನಾವಣೆಯಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ನೇತೃತ್ವದ ವಿರೋಧ ಪಕ್ಷಗಳು ವಕ್ಫ್ ಹೋರಾಟ ಎಂಬ ರಾಜಕೀಯ ನಾಟಕ ಆರಂಭಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಜಿಲ್ಲೆಯ ಬೂವನಹಳ್ಳಿ ಗ್ರಾಮದ ಹೆಲಿಪ್ಯಾಡ್ ಆವರಣದಲ್ಲಿ ಇಂದು(ಡಿ.5) ಬಿಜೆಪಿಯವರ ವಕ್ಫ್ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿರುವ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ರಾಜಕೀಯ
ಇಬ್ಬಂದಿತನ ಮಾಡಿ ರಾಜಕೀಯಕ್ಕಾಗಿ ಹೋರಾಟ ಕೈಗೊಂಡಿದ್ದಾರೆ. 2014ರಲ್ಲಿ ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ವಕ್ಫ್ ಆಸ್ತಿಗಳನ್ನು ತೆರವುಗೊಳಿಸುವ ಭರವಸೆಯನ್ನು ನೀಡಿದ್ದರು. ಬಳಿಕ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಅತಿಕ್ರಮಣ ಮಾಡಿಕೊಂಡಿರುವವರಿಗೆ ನೋಟಿಸ್‌ಗಳನ್ನೂ ನೀಡಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಇಂದು(ಡಿ.5) ರಾಜ್ಯಪಾಲರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಅರ್ಜಿ ವಿಚಾರಣೆಯನ್ನು 2025ರ ಜನವರಿ 25ಕ್ಕೆ ಮುಂದೂಡಿದರ ಬಗ್ಗೆ ಮಾತನಾಡಿದ ಅವರು, ಈ ಕುರಿತು ನಾನು ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ, ಮಾಹಿತಿ ಪಡೆದ ನಂತರ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…