ಬೆಂಗಳೂರು: ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ( ಆಗಸ್ಟ್ 17 ) ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಮಾನ್ಯ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿದಂತೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
ಸಂವಿಧಾನ ಬಾಹಿರ ನಿರ್ಣಯದ ವಿರುದ್ಧ ಕಾನೂನು ಹೋರಾಟ: ಕರ್ನಾಟಕ ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರ ಕೈಗೊಂಡಿದ್ದಾರೆ. ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು ಎಂದರು.
ರಾಜಿನಾಮೆ ನೀಡುವ ಪ್ರಶ್ನೆಯಿಲ್ಲ: ತನ್ನ ವಿರುದ್ದ ದೂರು ಬಂದ ದಿನವೇ ಶೋಕಾಸ್ ನೋಟೀಸ್ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜಿನಾಮೆ ನೀಡುವ ಪ್ರಶ್ನೆಯಿಲ್ಲ. ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜಿನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ .ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ , ಜನಾರ್ಧನ ರೆಡ್ಡಿ ಅವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ನವೆಂಬರ್ ತಿಂಗಳಲ್ಲಿ ಎಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದರು.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…