ಬೆಂಗಳೂರು: ಕರ್ನಾಟಕ ಬಜೆಟ್ 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಹೊಸ 500 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಬಜೆಟ್ ಮಂಡಿನೆ ಮಾಡಿದ ಅವರು, ರಾಜ್ಯದಲ್ಲಿ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಮಾಡಲಾಗುವುದು. ಅಲ್ಲದೇ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲು 1,500 ಕೋಟಿ ರೂ.ಮೀಸಲಿರಿಸಲಾಗಿದೆ ಎಂದರು.
ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ತಲಾ 2,000 ರೂ. ಹೆಚ್ಚಳ ಮಾಡಲಾಗುವುದು. ಶಾಲೆಗಳಲ್ಲಿ ಕೆಲಸ ಮಾಡುವ ಅಡುಗೆ ಸಿಬ್ಬಂದೆ ಮಾಸಿಕ ಗೌರವಧನ 1,000 ರೂ. ಹೆಚ್ಚಳ ಮಾಡಲಾಗುವುದು. ಇನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು, ಪ್ರವಾಸಿಗರಿಗೆ ಶುಷಿ ಮತ್ತು ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈಟೆಕ್ ಮತ್ಸ್ಯ ದರ್ಶಿನಿ ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.
ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆಗಳ ಅಳವಡಿಕೆ
ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸುವುದ ಮೂಲಕ ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸಲು ರೈತರ ಆದಾಯ ಹಾಗೂ ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು 88 ಕೋಟಿ ರೂ. ಮೀಸಲು ಮಾಡಲಾಗಿದೆ ಎಂದು ತಿಳಿಸಿದರು.




