ರಾಜ್ಯ

ಕರ್ನಾಟಕ ಬಜೆಟ್‌| ರಾಜ್ಯದಲ್ಲಿ ಹೊಸ 500 ಕರ್ನಾಟಕ ಪಬ್ಲಿಕ್‌ ಶಾಲೆಗಳ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಬಜೆಟ್‌ 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ ಹೊಸ 500 ಕರ್ನಾಟಕ ಪಬ್ಲಿಕ್‌ ಶಾಲೆಗಳನ್ನು ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಬಜೆಟ್‌ ಮಂಡಿನೆ ಮಾಡಿದ ಅವರು, ರಾಜ್ಯದಲ್ಲಿ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್‌ ಶಾಲೆಗಳ ನಿರ್ಮಾಣ ಮಾಡಲಾಗುವುದು. ಅಲ್ಲದೇ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ ಮತ್ತು ಬಾಳೆಹಣ್ಣು ನೀಡಲು 1,500 ಕೋಟಿ ರೂ.ಮೀಸಲಿರಿಸಲಾಗಿದೆ ಎಂದರು.

ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ತಲಾ 2,000 ರೂ. ಹೆಚ್ಚಳ ಮಾಡಲಾಗುವುದು. ಶಾಲೆಗಳಲ್ಲಿ ಕೆಲಸ ಮಾಡುವ ಅಡುಗೆ ಸಿಬ್ಬಂದೆ ಮಾಸಿಕ ಗೌರವಧನ 1,000 ರೂ. ಹೆಚ್ಚಳ ಮಾಡಲಾಗುವುದು. ಇನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು, ಪ್ರವಾಸಿಗರಿಗೆ ಶುಷಿ ಮತ್ತು ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈಟೆಕ್‌ ಮತ್ಸ್ಯ ದರ್ಶಿನಿ ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದಾರೆ.

ತೊಗರಿ ಬೆಳೆಯಲ್ಲಿ ಹೊಸ ತಾಂತ್ರಿಕತೆಗಳ ಅಳವಡಿಕೆ

ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸುವುದ ಮೂಲಕ ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸಲು ರೈತರ ಆದಾಯ ಹಾಗೂ ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು 88 ಕೋಟಿ ರೂ. ಮೀಸಲು ಮಾಡಲಾಗಿದೆ ಎಂದು ತಿಳಿಸಿದರು.

 

ಅರ್ಚನ ಎಸ್‌ ಎಸ್

Recent Posts

ಗೋಣಿಕೊಪ್ಪದಲ್ಲಿ ಗುಡುಗು ಸಹಿತ ಧಾರಾಕಾರ ಮಳೆ

ಗೋಣಿಕೊಪ್ಪ: ಪಟ್ಟಣದಲ್ಲಿ ಇಂದು ಸಂಜೆ ವೇಳೆಗೆ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು. ಧಾರಾಕಾರ ಮಳೆಗೆ ಶಾಲಾ-ಕಾಲೇಜುಗಳ ಮೈದಾನಗಳು ಕೆರೆಯಂತಾಗಿದ್ದು, ಮಕ್ಕಳು…

6 hours ago

ಸಿಇಟಿ: ಕನ್ನಡ ಭಾಷೆ ಪರೀಕ್ಷೆ ಏಪ್ರಿಲ್.‌15ಕ್ಕೆ ಹಿಂದೂಡಿಕೆ

ಬೆಂಗಳೂರು: ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಈ ಮೊದಲು ನಿಗದಿಗೊಳಿಸಿದ್ದ ಸಿಇಟಿ ಕನ್ನಡ ಪರೀಕ್ಷೆಯನ್ನು ಏಪ್ರಿಲ್.‌18ಕ್ಕೆ ಬದಲಾಗಿ ಏಪ್ರಿಲ್.‌15ರಂದೇ…

7 hours ago

ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ. ಅಂತರಗಂಗೆಯ 500…

7 hours ago

ಮಡಿಕೇರಿ| ಮಾರ್ಚ್.21ರಿಂದ ಹುಲಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್

ಮಡಿಕೇರಿ: ಫ್ರೆಂಡ್ಸ್ ಹುಲಿತಾಳ ಇವರ ವತಿಯಿಂದ ಪ್ರಥಮ ವರ್ಷದ ಹುಳಿತಾಳ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯವು ಮಾರ್ಚ್ 21,22,23ರಂದು ಮಡಿಕೇರಿಯ…

7 hours ago

ಆರ್‌ಎಸ್‌ಎಸ್‌ನ್ನು ಎದುರಿಸಲು ನಾವು ಸಿದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: 1942ರಲ್ಲಿ ಬ್ರಿಟಿಷರೊಂದಿಗೆ ಸೇರಿಕೊಂಡಿದ್ದವರು. ನೀವು ಬ್ರಿಟಿಷರ ಏಜೆಂಟರು ಎಂದು ಬಿಜೆಪಿ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಈ…

8 hours ago

ಪಿರಿಯಾಪಟ್ಟಣ: ಕ್ರೀಡಾಕೂಟದಲ್ಲಿ ಭಾಗವಹಿಸಿ ಸಂಭ್ರಮಿಸಿದ ಮಹಿಳೆಯರು

ಪಿರಿಯಾಪಟ್ಟಣ: ನಿತ್ಯ ಮನೆ ಕೆಲಸ, ಕೃಷಿ ಕೆಲಸದಲ್ಲಿಯೇ ಸಂಪೂರ್ಣ ಸಮಯ ಕಳೆಯುತ್ತಿದ್ದ ಮಹಿಳೆಯರು ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಮಕ್ಕಳಂತೆ ಸಂಭ್ರಮಿಸಿದ್ದಾರೆ.…

8 hours ago