Mysore
19
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ: ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ ಕಾರಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರೆ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ.

ಅಲ್ಲದೇ ಅಲ್ಲಿಗೆ ತೆರಳಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾಶ್ಮೀರಕ್ಕೆ ಸಚಿವ ಸಂತೋಷ್‌ ಲಾಡ್‌ ಅವರನ್ನೂ ಕಳಿಸಲಾಗಿದೆ ಎಂದರು.

ಇನ್ನು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವ ನಿಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಹೇಳಿದರು.

Tags:
error: Content is protected !!