ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ ಕಾರಣವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರೆ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ.
ಅಲ್ಲದೇ ಅಲ್ಲಿಗೆ ತೆರಳಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾಶ್ಮೀರಕ್ಕೆ ಸಚಿವ ಸಂತೋಷ್ ಲಾಡ್ ಅವರನ್ನೂ ಕಳಿಸಲಾಗಿದೆ ಎಂದರು.
ಇನ್ನು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವ ನಿಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಭಯೋತ್ಪಾದಕರನ್ನು ನಿರ್ಮೂಲನೆಗೊಳಿಸುವ ಜೊತೆಗೆ ದೇಶದ ಜನರಿಗೆ ಭದ್ರತೆ ನೀಡುವ ಕಾರ್ಯವನ್ನು ಕೇಂದ್ರ ಸಮರ್ಥವಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…