ಬೆಂಗಳೂರು: ಮೈಕ್ರೋ ಫೈನಾನ್ಸ್ ವಿರುದ್ಧದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಈ ಸಂಬಂಧ ರಾಜ್ಯದಲ್ಲಿ ಶೀಘ್ರವೇ ಕಾನೂನು ಜಾರಿಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಅಂಕಿತ ದೊರೆತಿದೆ ಎಂದು ಹೇಳಿದ್ದಾರೆ.
ಈ ಕಾನೂನು ಶೀಘ್ರದಲ್ಲಿ ಜಾರಿಗೆ ಬಂದು ಮೈಕ್ರೋ ಫೈನಾನ್ಸ್‌ಗಳ ನಿಯಮ ಬಾಹಿರ ಸಾಲ ವಸೂಲಿ, ಕಿರುಕುಳಗಳ ವಿರುದ್ಧ ಜನರಿಗೆ ರಕ್ಷಣೆ ನೀಡಲಿದೆ. ಅಲ್ಲದೇ ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಹೆದರಿ ಯಾರೊಬ್ಬರೂ ದುಡುಕಿನ ನಿರ್ಧಾರ ಕೈಗೊಳ್ಳದಿರಿ. ನಿಮ್ಮ ಜೊತೆ ನಮ್ಮ ಸರ್ಕಾರ ಇದೆ ಎಂದು ಭರವಸೆ ನೀಡಿದ್ದಾರೆ.





