ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಜಾರಿಯಾದ ಪಂಚ ಗ್ಯಾರಂಟಿ ಯೋಜನೆಗಳು ಉಚಿತ ಕೊಡುಗೆಗಳಲ್ಲ. ಅವುಗಳು ಸಾಮಾಜಿಕ ಮತ್ತು ಆರ್ಥಿಕ ತತ್ವದಲ್ಲಿ ಮಾಡಿರುವ ಹೂಡಿಕೆಗಳು ಎಂದು ಆತ್ಮವಿಶ್ವಾಸದಿಂದ ಹೇಳಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.7) ಬಜೆಟ್ ಮಂಡಿನೆ ವೇಳೆ ತಮ್ಮ ಭಾಷಣ ಮಾಡಿದ ಅವರು, ಲಭ್ಯ ಸಂಪನ್ಮೂಲಗಳನ್ನು ಸರ್ವರಿಗೂ ಲಭ್ಯವಾಗುವಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆರ್ಥಿಕ ಅಭಿವೃದ್ಧಿ ಮತ್ತು ಜನಕಲ್ಯಾಣಗಳ ಮಧ್ಯೆ ಸಮತೋಲನ ಸಾಧಿಸಿ, ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯ ಮೂಲಕ ಕರ್ನಾಟಕ ಅಭಿವೃದ್ಧಿ ಮಾದರಿಯನ್ನು ರೂಪಿಸುತ್ತಿದ್ದೇವೆ ಎಂದು ಹೇಳಿದರು.
ನಾಡಿನ ಖ್ಯಾತ ವಿದ್ವಾಂಸರಾಗಿದ್ದ ಮುಜಾಫರ್ ಅಸ್ಸಾದಿ ಅವರು, ಗ್ಯಾರಂಟಿ ಯೋಜನೆಗಳ ಹಿಂದೆ ಬಡತನದ ನೋವು ಮತ್ತು ಹಿಂಸೆ ಇದೆ. ಅಸಮಾನ ಭಾರತದ ಪರಿಕಲ್ಪನೆಯಿದ್ದು, ಮಹಿಳೆಯರಲ್ಲಿ ಮಡುಗಟ್ಟಿದ ನೋವುಗಳಿದೆ. ಜಗತ್ತಿನ ವಿವಿಧ ವೇದಿಕೆಗಳು ಯಾವ ಪ್ರಶ್ನೆಗಳಿಗೆ ಇಂದು ಹುಡುಕಾಟ ನಡೆಸುತ್ತಿವೆಯೋ ಅವುಗಳಿಗೆ ಕರ್ನಾಟಕ ಸರ್ಕಾರ ಉತ್ತರ ನೀಡುವ ರೂಪದಲ್ಲಿ ತನ್ನ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾ ಮಾಡುತ್ತಿದೆ ಎಂದಿದ್ದರು. ಹೀಗಾಗಿ ಸಾರ್ವಜನಿಕರು ಕೊಂಡುಕೊಳ್ಳುವ ಶಕ್ತಿ ಲಭಿಸಲಿ ಎಂಬ ಆಶಯದಿಂದ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ ಎಂದು ತಿಳಿಸಿದರು.
ಇನ್ನು ಮಹಿಳಾ ಸಶಕ್ತಿಕರಣದ ಮೂಲಕ ರಾಜ್ಯವನ್ನು ಮುನ್ನಡೆಸುವುದು ಒಂದು ಬಗೆಯಾದರೆ, ಹಸಿರು ಆರ್ಥಿಕತೆಯ ಮುಖಾಂತರ ಪರಿಸರದ ಬಿಕ್ಕಟ್ಟುಗಳಿಗೆ ಉತ್ತರ ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದರು.
ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…
ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…
ಚೆನ್ನೈ : ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…
ಬೆಂಗಳೂರು : ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…
ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ…