ರಾಜ್ಯ

ಒಕ್ಕಲಿಗ ನಾಯಕರನ್ನುರಾಜಕೀಯವಾಗಿ ಮುಗಿಸಿದ ದೇವೇಗೌಡ: ಸಿಎಂ ಸಿದ್ದರಾಮಯ್ಯ

ಹಾಸನ: ಒಕ್ಕಲಿಗ ನಾಯಕರಾಗಿದ್ದ ಕೃಷ್ಣಪ್ಪರವರ ಹೇಳಿಕೆ ಇದೀಗ ನಿಜವಾಗಿದೆ. ಎಚ್‌.ಡಿ.ದೇವೇಗೌಡರು ಸಾಲು ಸಾಲು ಒಕ್ಕಲಿಗ ನಾಯಕರನ್ನು ರಾಜಕೀಯವಾಗಿ ಮುಗಿಸಿದ್ದರ ಫಲವನ್ನು ಈಗ ಅನುಭವಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಲ್ಲೆಯ ಎಸ್‌.ಎಂ.ಕೃಷ್ಣನಗರದಲ್ಲಿ ಇಂದು (ಡಿ.5) ಆಯೋಜಿಸಲಾಗಿದ್ದ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಮತ್ತು ಜಾಲಪ್ಪ ಒಟ್ಟಾಗಿ ರಾಮಕೃಷ್ಣಹೆಗಡೆಯವರ ಬದಲಿಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದ್ದೇವು, ಆದರೆ ಅವರು ನನ್ನನ್ನೇ ಪಕ್ಷದಿಂದ ಉಚ್ಚಾಟಿಸಿದರು. ದೇವೇಗೌಡರು ನನಗಿಂತ 15 ವರ್ಷ ಹಿರಿಯರಾಗಿದ್ದು, ಅಷ್ಟೇ ಘನತೆಯಿಂದ ಮಾತನಾಡಬೇಕಿತ್ತು. ನಾನು ಅವರ ಮುಂದೆ ಎಂದಿಗೂ ಗರ್ವ ತೋರಿಸಿದವನಲ್ಲ.  ಹೀಗಿದ್ದರೂ ನನಗೆ ಸಿದ್ದರಾಮಯ್ಯ ಅವರ ಗರ್ವಭಂಗ ಮಾಡುತ್ತೇನೆ ಎಂದು ಹೇಳಿಕೆ ನೀಡಿ ಅವರೇ ಪಕ್ಷವೇ ರಾಜಕೀಯವಾಗಿ ಮುಗಿದು ಹೋಗುವ ಪರಿಸ್ಥಿತಿ ಎದುರಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ದೇವೇಗೌಡ ಅವರು ತಮ್ಮ ಪಕ್ಷದ ರಾಜಕೀಯದಲ್ಲಿ ಬಚ್ಚೇಗೌಡರು, ವೈ.ಕೆ.ರಾಮಯ್ಯ, ಬೈರೇಗೌಡರು, ಕೃಷ್ಣಪ್ಪ, ಚಲುವರಾಯಸ್ವಾಮಿ ಸೇರಿದಂತೆ ಎಷ್ಟೋ ಮಂದಿ ಒಕ್ಕಲಿಗ ನಾಯಕರನ್ನು ನಿರಂತರವಾಗಿ ಮುಗಿಸಿದ್ದಾರೆ. ಈ ಪಾಪದ ಹೊರೆಯನ್ನು ಹೊರಬೇಕಾಗುತ್ತದೆ ಎಂದು ಒಕ್ಕಲಿಗ ನಾಯಕ ಕೃಷ್ಣಪ್ಪ ಅವರು ಮೊದಲೇ ದೇವೇಗೌಡರಿಗೆ ಹೇಳಿದ್ದರು. ಆದರೆ ಇದೀಗ ಒಕ್ಕಲಿಗ ನಾಯಕ ಕೃಷ್ಣಪ್ಪ ಅವರ ಹೇಳಿಕೆ ನಿಜವಾಗಿದೆ ಎಂದಿದ್ದಾರೆ.

ಹಾಸನದ ಹೆಣ್ಣು ಮಕ್ಕಳು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ರೈತರ ಪಾಲಿನ ಸಾಲದಲ್ಲಿ ಶೇ.58 ರಷ್ಟನ್ನು ಕಡಿತಗೊಳಿಸಿದೆ. ಇದರಿಂದ ಹಾಸನದ ರೈತರು ಹಾಗೂ ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಮಗ ಎಂದು ಹೇಳುವ ಎಚ್‌.ಡಿ.ಕುಮಾರಸ್ವಾಮಿಯವರು ಯಾಕೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಕೇಂದ್ರದಲ್ಲಿ ಮಂತ್ರಿಯಾಗಿರುವ ಎಚ್.ಡಿ.ಕುಮಾರಸ್ವಾಮಿಯವರು ಮೇಕೆದಾಟು ವಿಚಾರದಲ್ಲಿ ಮೌನ ಆಗಿರುವುದು ಯಾಕೆ? ಬೆಂಗಳೂರು ಜನತೆಗೆ ನೀರು ಬೇಕಾಗಿದೆ ಮೊದಲು ಕೊಡಿಸಲಿ. ನಬಾರ್ಡ್‌ನಿಂದ ಆಗಿರುವ ಅನ್ಯಾಯವನ್ನು ಕುಮಾರಸ್ವಾಮಿ ಯಾಕೆ ಸರಿಪಡಿಸುತ್ತಿಲ್ಲ? ಕಳೆದ ಹಣಕಾಸು ವರ್ಷದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಆಗಿರುವ 11 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯಕ್ಕೆ ಕೊಡಿಸಲು ಬಿಜೆಪಿ-ಜೆಡಿಎಸ್ ಯಾಕೆ ಕೇಂದ್ರ ಸರ್ಕಾರದ ಹತ್ತಿರ ಚರ್ಚಿಸುತ್ತಿಲ್ಲ? ರಾಜ್ಯಕ್ಕೆ, ರಾಜ್ಯದ ಜನರಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕುಮಾರಸ್ವಾಮಿ ಅವರಿಗೆ ಮತ್ತು ಬಿಜೆಪಿ ಸಂಸದರಿಗೆ ಮುಖ್ಯಮಂತ್ರಿಗಳು ಸವಾಲು ಹಾಕಿದ್ದಾರೆ.

ಡಾ.ರಾಜ್‌ ಅವರಿಗೆ ಅಭಿಮಾನಿಗಳೇ ದೇವರಾಗಿದ್ದರೂ, ಆದರೆ ನಮಗೆ ಮತದಾರರೇ ದೇವರು

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ರಾಜಕೀಯ ಮಹಾನ್ ನಾಯಕರ ಮೊಮ್ಮಕ್ಕಳನ್ನು ಸೋಲಿಸುವ ಮೂಲಕ ಮತದಾರರು ನಮಗೆ ಮೂರು ಕ್ಷೇತ್ರಗಳಲ್ಲಿ ನಮ್ಮ ನಮ್ಮ ಪಕ್ಷಕ್ಕೆ ಮತ ನೀಡಿ ಆರ್ಶೀವಾದಿಸಿದ್ದಾರೆ. ಹೀಗಾಗಿ ಡಾ.ರಾಜ್‌ ಕುಮಾರ್‌ ಅವರಿಗೆ ಅಭಿಮಾನಿಗಳು ಹೇಗೆ ದೇವರಾಗಿದ್ದಾರೋ ಅದೇ ರೀತಿ ನಮಗೆ ಮತದಾರರು ದೇವರಾಗಿದ್ದಾರೆ ಎಂದು ಹೇಳಿದ್ದಾರೆ.

ಈ ರಾಜ್ಯದ ಮತದಾರರು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಗೆ ಮುಖ್ಯಮಂತ್ರಿ ಆಗುವಷ್ಟು ಬಹುಮತವನ್ನು ನೀಡಿಯೇ ಇಲ್ಲ. ಒಂದು ಬಾರಿ ಕಾಂಗ್ರೆಸ್ ಬೆಂಬಲದಿಂದ ಹಾಗೂ ಇನ್ನೊಂದು ಬಾರಿ ಬಿಜೆಪಿ ಬೆಂಬಲದಿಂದ ಮುಖ್ಯಮಂತ್ರಿಯಾಗಿದ್ದರೂ. ನಂತರ ಈ ಎರಡೂ ಪಕ್ಷಗಳಿಗೆ ವಂಚಿಸಿದರು ಎಂದು ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲಾ ಸುಭದ್ರ ಆಡಳಿತ ನೀಡಿದೆ. 2013 ರಲ್ಲಿ ಕೊಟ್ಟ ಮಾತಿನಂತೆ ಹಲವಾರು ಭಾಗ್ಯಗಳನ್ನು ಜಾರಿ ಮಾಡಿದ್ದೇವೆ. ಅಲ್ಲದೇ ಈ ಬಾರಿ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ್ದ ಪಂಚ ಗ್ಯಾರಂಟಿಗಳ ಭರವಸೆಯನ್ನು ಈಡೇರಿಸಿದೆ. ಈ ಹಿಂದೆ ಆಡಳಿತ ನಡೆಸಿದ್ದ ಬಿಜೆಪಿಯಾಗಲಿ ಅಥವಾ ಜೆಡಿಎಸ್ ಆಗಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳಲಿಲ್ಲ. ಪ್ರಧಾನಿ ಮೋದಿ ಅವರ ಸರ್ಕಾರ ನಾವು ದುಡ್ಡು ಕೊಡ್ತೀವಿ ಅಂದರೂ ಅಕ್ಕಿ ಕೊಡಲಿಲ್ಲ. ಇಂತಹ ಜನದ್ರೋಹಿ ಸರ್ಕಾರ ಬಿಜೆಪಿಯದ್ದು ಎಂದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ-ಜೆಡಿಎಸ್  ಜನದ್ರೋಹಿ ಪಕ್ಷಗಳು ಸಿದ್ದರಾಮಯ್ಯ ಆಕ್ರೋಶ

ನಮ್ಮ ಸರ್ಕಾರದ ಪಂಚ ಗ್ಯಾರಂಟಿಗಳನ್ನು ಪಡೆದಿರುವುದಕ್ಕೆ ಫಲಾನುಭವಿಗಳನ್ನು ಅವಮಾನಿಸುತ್ತಿರುವ ಬಿಜೆಪಿ-ಜೆಡಿಎಸ್ ಪರಮ ಜನದ್ರೋಹಿಗಳು. ಯಾವುದೇ ಕಾರಣಕ್ಕೂ ನಾವು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಸರ್ಕಾರದಿಂದ ಗ್ಯಾರಂಟಿಗಳಿಗಾಗಿ 56 ಸಾವಿರ ಕೋಟಿ ರೂಪಾಯಿಗಳನ್ನು ಬಿಡುಗಡೆಗೊಳಿಸಿ ರಾಜ್ಯ ಜನರ ಖಾತೆಗೆ ನೇರವಾಗಿ ಹಾಕುತ್ತಿದ್ದೇವೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

2028ಕ್ಕೆ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕಾಂಗ್ರೆಸ್‌ ತೆಕ್ಕೆಗೆ

ಹಾಸನದಲ್ಲಿ 40 ವರ್ಷಗಳಿಂದ ಈ ಮಟ್ಟದ ದೊಡ್ಡ ಜನಕಲ್ಯಾಣ ಕಾಂಗ್ರೆಸ್ ಸಮಾವೇಶ ಹಿಂದೆಂದೂ ಆಗಿರಲಿಲ್ಲ. ಅದಲ್ಲಿ ಸ್ವಾಭಿಮಾನಿ ಒಕ್ಕೂಟಗಳು, ಕಾಂಗ್ರೆಸ್ಸೇತರ ಸಂಘಟನೆಗಳು ಮತ್ತು ಕಾಂಗ್ರೆಸ್ ಪಕ್ಷ ಒಟ್ಟಾಗಿ ಶ್ರಮಿಸಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 5 ವರ್ಷಗಳ ಕಾಲ ನಿರಂತರವಾಗಿ ಕಾಂಗ್ರೆಸ್ ಸರ್ಕಾರ ಮಾತ್ರ ಸುಭದ್ರ ಆಡಳಿತ ನೀಡಲು ಸಾಧ್ಯ. 2028ರ ವಿಧಾನಸಭೆ ಚುನಾವಣೆಯಲ್ಲಿ ಹಾಸನದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯಭೇರಿಗಳಿಸಲಿದ್ದು, ಹಾಸನ ಮತ್ತೊಮ್ಮೆ ಕಾಂಗ್ರೆಸ್‌ ತೆಕ್ಕೆಗೆ ಬರುವುದು ಶತಸಿದ್ದ ಎಂದು ಭರವಸೆ ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹೈಕೋರ್ಟ್‌ಗೆ ಎರಡು ವಾರ ಚಳಿಗಾಲದ ರಜೆ: ಜನವರಿ.5ರಿಂದ ಕಲಾಪ ಪುನಾರಂಭ

ಬೆಂಗಳೂರು: ಹೈಕೋರ್ಟ್‌ಗೆ ಡಿಸೆಂಬರ್.‌20ರಿಂದ 31ರವರೆಗೆ ಎರಡು ವಾರ ಚಳಿಗಾಲದ ರಜೆ ಇರುತ್ತದೆ. ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು,…

55 mins ago

ಮಾಜಿ ಸಚಿವ ಕೆ.ಎನ್‌ ರಾಜಣ್ಣ ಭೇಟಿ ಮಾಡಿದ ಡಿಸಿಎಂ

ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎನ್‌ ರಾಜಣ್ಣ ಅವರ ನಿವಾಸಕ್ಕೆ ತೆರಳಿದ ಡಿಕೆ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ .…

58 mins ago

ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂದೆ ರೀಲ್ಸ್‌ ಪ್ರಕರಣ: ಮಹಿಳೆ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ 108 ಅಡಿ ಪ್ರತಿಮೆ ಮುಂಭಾಗದಲ್ಲಿ ರೀಲ್ಸ್ ಮಾಡಿದ್ದ ಮಹಿಳೆ ಹಾಗೂ ಹಿಟಾಚಿ…

2 hours ago

ಕರ್ನಾಟಕದಲ್ಲಿ ಮೈಕೊರೆಯುವ ಚಳಿ : 7ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಅಬ್ಬರ ಅಧಿಕವಾಗಿದ್ದು ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಚಳಿ ಕಂಡುಬರುತ್ತಿದೆ . ಹವಮಾನ ಇಲಾಖೆಯ…

2 hours ago

ಪಲ್ಸ್‌ ಪೋಲಿಯೋ ಅಭಿಯಾನ ಆರಂಭ : 5 ವರ್ಷದೊಳಗಿನ ನಿಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ !

ಕರ್ನಾಟಕದಾದ್ಯಂತ ಇಂದು ರಾಷ್ಟ್ರೀಯಾ ಪಲ್ಸ್‌ ಪೋಲಿಯೋ ಅಭಿಯಾನ 2025 ಚಾಲನೆ ಹೊರಡಿಸಲಾಗಿದ್ದು , ಡಿ.24 ವರೆಗೆ ಈ ಅಭಿಯಾನದಲ್ಲಿ 5…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ:  ಚಳಿಗಾಲದ ಸಂಸತ್ ಅಧಿವೇಶನದ ಒಂದು ವಾರೆನೋಟ

ದೆಹಲಿ ಕಣ್ಣೋಟ -ಶಿವಾಜಿ ಗಣೇಶನ್‌  ಹತ್ತೊಂಬತ್ತು ದಿನಗಳ ಸಂಸತ್ತಿನ ಚಳಿಗಾಲದ ಅಧಿವೇಶನ ಮುಕ್ತಾಯಗೊಂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಎಂದಿನಂತೆ…

2 hours ago