ಬೆಂಗಳೂರು: ಮುಡಾ ಪ್ರಕರಣದಲ್ಲಿ ಹೈಕೋರ್ಟ್ ಸಿಬಿಐ ತನಿಖೆಗೆ ವಹಿಸುವುದು ಬೇಡವೆಂದು ಹೇಳಿದೆಯೇ ಹೊರತು, ಸಿಎಂ ಸಿದ್ದರಾಮಯ್ಯ ಅವರನ್ನು ನಿಪರರಾಧಿಯೆಂದು ಹೇಳಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹಮಯಿ ಕೃಷ್ಣ ಹೈಕೋರ್ಟ್‌ನಲ್ಲಿ ಮುಡಾ ಕೇಸನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಅರ್ಜಿ ಹಾಕಿದ್ದರು. ಆದರೆ ಹೈಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಕೋರ್ಟ್ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರನ್ನು ನಿರಪಾಧಿ ಎಂದು ತೀರ್ಪು ಪ್ರಕಟಿಸಿಲ್ಲ ಎಂದು ಹೇಳಿದರು.
ನಮ್ಮ ಪಕ್ಷ ಮುಡಾ ಪ್ರಕಣದಲ್ಲಿ ಹೋರಾಟ ಮಾಡಿದಲ್ಲದೇ ಪಾದಯಾತ್ರೆಯನ್ನು ಮಾಡಿತ್ತು. ಆದರೆ ಇದೀಗ ಹೈಕೋರ್ಟ್ ನೀಡಿದ ತೀರ್ಪಿನಿಂದ ಯಾವುದೇ ಹಿನ್ನೆಡೆಯಾಗುವುದಿಲ್ಲ. ಈಗಾಗಲೇ ಮುಡಾ ಪ್ರಕಣವನ್ನು ಇ.ಡಿ. ಹಾಗೂ ಲೋಕಾಯುಕ್ತ ಸಂಸ್ಥೆಗಳು ತನಿಖೆ ಮಾಡುತ್ತಿವೆ. ಹೀಗಾಗಿ ಈ ಪ್ರಕರಣದಲ್ಲಿ ಮುಂದೆ ಏನಾಗುತ್ತೋ ನೋಡೋಣ ಎಂದರು.





