Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಕೆಂಗಲ್ ಹನುಮಂತಯ್ಯರವರು ದಕ್ಷ ಆಡಳಿಗಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಂಗಲ್ ಹನುಮಂತಯ್ಯ ಅವರು ಒಬ್ಬ ದಕ್ಷ ಆಡಳಿಗಾರರಾಗಿ ರಾಜ್ಯದ 2ನೇ ಮುಖ್ಯಮಂತ್ರಿಯಾಗಿ ಮತ್ತು ಕೇಂದ್ರದ ಮಂತ್ರಿಯಾಗಿ ಆಡಳಿತವನ್ನು ಉತ್ತಮವಾಗಿ ನಡೆಸಿದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರದ ವತಿಯಿಂದ ಇಂದು(ಡಿ.1) ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಕಾರ್ಯಕ್ರಮದಲ್ಲಿ ಹನುಮಂತಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿಯನ್ನು ಇಂದು ಆಚರಿಸಲಾಗುತ್ತಿದ್ದು, ಸರ್ಕಾರದ ಪರವಾಗಿ ಪ್ರತಿ ವರ್ಷವೂ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವಿಸಿ ಅವರನ್ನು ಸ್ಮರಿಸಲಾಗುತ್ತಿದೆ ಎಂದರು.

ಹನಮಂತಯ್ಯ ಅವರು ವಿಧಾನಸೌಧವನ್ನು ಕಟ್ಟಿಸಿದಾಗ ಸರ್ಕಾರದ ಕೆಲಸ ದೇವರ ಕೆಲಸ ಎಂದು ಹೇಳಿದರು. ಏಕೀಕರಣ ಆಗಬೇಕೆಂದು ಪ್ರಬಲವಾಗಿ ನಂಬಿ ಕನ್ನಡ ನಾಡಿನ ಜನರು ಒಟ್ಟುಗೂಡಿ ಒಂದು ರಾಜ್ಯವಾಗಬೇಕೆಂದು ಬಯಸಿದವರು. ಅಲ್ಲದೇ ಕನ್ನಡ ಮಾತನಾಡುವವರು ಒಂದಾಗಿ ನಾಡಿನ ಸರ್ವತೋಮುಖ ಅಭಿವೃದ್ಧಿ ಆಗಬೇಕೆಂದು ಶ್ರಮಿಸಿ ರಾಜ್ಯಕ್ಕಾಗಿ ಕೆಲಸ ಮಾಡಿದವರು ಎಂದು ಹೇಳಿದರು.

ಇನ್ನು ಕೆಂಗಲ್‌ ಹನುಮಂತಯ್ಯ ಅವರು ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರು ಅವರೊಂದಿಗೆ ಉತ್ತಮ ಸಂಬಂಧವನ್ನಿಟ್ಟುಕೊಂಡಿದ್ದರು. ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ಅವರ ಜನಪರ ಆಡಳಿತ ದಕ್ಷತೆಯಿಂದ ಕೂಡಿತ್ತು. ಅದನ್ನು ನಾವೆಲ್ಲರೂ ಅಳವಡಿಸಿಕೊಂಡು ಅವರು ಹಾಕಿರುವ ದಾರಿಯಲ್ಲಿಯೇ ಸಾಗುವ ಪ್ರಯತ್ನ ಮಾಡಬೇಕು. ಈ ಮೂಲಕವೇ ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ತಿಳಿಸಿದರು.

Tags: