ಬೆಂಗಳೂರು: ಕೆಂಗಲ್ ಹನುಮಂತಯ್ಯ ಅವರು ಒಬ್ಬ ದಕ್ಷ ಆಡಳಿಗಾರರಾಗಿ ರಾಜ್ಯದ 2ನೇ ಮುಖ್ಯಮಂತ್ರಿಯಾಗಿ ಮತ್ತು ಕೇಂದ್ರದ ಮಂತ್ರಿಯಾಗಿ ಆಡಳಿತವನ್ನು ಉತ್ತಮವಾಗಿ ನಡೆಸಿದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸರ್ಕಾರದ ವತಿಯಿಂದ ಇಂದು(ಡಿ.1) ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಕಾರ್ಯಕ್ರಮದಲ್ಲಿ ಹನುಮಂತಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿಯನ್ನು ಇಂದು ಆಚರಿಸಲಾಗುತ್ತಿದ್ದು, ಸರ್ಕಾರದ ಪರವಾಗಿ ಪ್ರತಿ ವರ್ಷವೂ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವಿಸಿ ಅವರನ್ನು ಸ್ಮರಿಸಲಾಗುತ್ತಿದೆ ಎಂದರು.
ಹನಮಂತಯ್ಯ ಅವರು ವಿಧಾನಸೌಧವನ್ನು ಕಟ್ಟಿಸಿದಾಗ ಸರ್ಕಾರದ ಕೆಲಸ ದೇವರ ಕೆಲಸ ಎಂದು ಹೇಳಿದರು. ಏಕೀಕರಣ ಆಗಬೇಕೆಂದು ಪ್ರಬಲವಾಗಿ ನಂಬಿ ಕನ್ನಡ ನಾಡಿನ ಜನರು ಒಟ್ಟುಗೂಡಿ ಒಂದು ರಾಜ್ಯವಾಗಬೇಕೆಂದು ಬಯಸಿದವರು. ಅಲ್ಲದೇ ಕನ್ನಡ ಮಾತನಾಡುವವರು ಒಂದಾಗಿ ನಾಡಿನ ಸರ್ವತೋಮುಖ ಅಭಿವೃದ್ಧಿ ಆಗಬೇಕೆಂದು ಶ್ರಮಿಸಿ ರಾಜ್ಯಕ್ಕಾಗಿ ಕೆಲಸ ಮಾಡಿದವರು ಎಂದು ಹೇಳಿದರು.
ಇನ್ನು ಕೆಂಗಲ್ ಹನುಮಂತಯ್ಯ ಅವರು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರೊಂದಿಗೆ ಉತ್ತಮ ಸಂಬಂಧವನ್ನಿಟ್ಟುಕೊಂಡಿದ್ದರು. ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ಅವರ ಜನಪರ ಆಡಳಿತ ದಕ್ಷತೆಯಿಂದ ಕೂಡಿತ್ತು. ಅದನ್ನು ನಾವೆಲ್ಲರೂ ಅಳವಡಿಸಿಕೊಂಡು ಅವರು ಹಾಕಿರುವ ದಾರಿಯಲ್ಲಿಯೇ ಸಾಗುವ ಪ್ರಯತ್ನ ಮಾಡಬೇಕು. ಈ ಮೂಲಕವೇ ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ತಿಳಿಸಿದರು.
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8.30ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಕುರಿತ…
ಹಾಸನ: ಬೇಲೂರು ತಾಲ್ಲೂಕಿನ ಕಾನಳ್ಳಿ ಅರಣ್ಯ ಪ್ರದೇಶದಲ್ಲಿದ್ದ ದೈತ್ಯಾಕಾರದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಮೂರನೇ…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಏಪ್ರಿಲ್.20 ಹಾಗೂ 21ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್.20ರಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮೈಸೂರಿಗೆ…
ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…
ಮೈಸೂರು: ನಗರದ ಮೇಟಗಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ…