ರಾಜ್ಯ

ಕೆಂಗಲ್ ಹನುಮಂತಯ್ಯರವರು ದಕ್ಷ ಆಡಳಿಗಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೆಂಗಲ್ ಹನುಮಂತಯ್ಯ ಅವರು ಒಬ್ಬ ದಕ್ಷ ಆಡಳಿಗಾರರಾಗಿ ರಾಜ್ಯದ 2ನೇ ಮುಖ್ಯಮಂತ್ರಿಯಾಗಿ ಮತ್ತು ಕೇಂದ್ರದ ಮಂತ್ರಿಯಾಗಿ ಆಡಳಿತವನ್ನು ಉತ್ತಮವಾಗಿ ನಡೆಸಿದವರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರದ ವತಿಯಿಂದ ಇಂದು(ಡಿ.1) ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕೆಂಗಲ್ ಹನುಮಂತಯ್ಯ ಅವರ ಪುಣ್ಯ ಸ್ಮರಣೆಯ ಕಾರ್ಯಕ್ರಮದಲ್ಲಿ ಹನುಮಂತಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿಯನ್ನು ಇಂದು ಆಚರಿಸಲಾಗುತ್ತಿದ್ದು, ಸರ್ಕಾರದ ಪರವಾಗಿ ಪ್ರತಿ ವರ್ಷವೂ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವಿಸಿ ಅವರನ್ನು ಸ್ಮರಿಸಲಾಗುತ್ತಿದೆ ಎಂದರು.

ಹನಮಂತಯ್ಯ ಅವರು ವಿಧಾನಸೌಧವನ್ನು ಕಟ್ಟಿಸಿದಾಗ ಸರ್ಕಾರದ ಕೆಲಸ ದೇವರ ಕೆಲಸ ಎಂದು ಹೇಳಿದರು. ಏಕೀಕರಣ ಆಗಬೇಕೆಂದು ಪ್ರಬಲವಾಗಿ ನಂಬಿ ಕನ್ನಡ ನಾಡಿನ ಜನರು ಒಟ್ಟುಗೂಡಿ ಒಂದು ರಾಜ್ಯವಾಗಬೇಕೆಂದು ಬಯಸಿದವರು. ಅಲ್ಲದೇ ಕನ್ನಡ ಮಾತನಾಡುವವರು ಒಂದಾಗಿ ನಾಡಿನ ಸರ್ವತೋಮುಖ ಅಭಿವೃದ್ಧಿ ಆಗಬೇಕೆಂದು ಶ್ರಮಿಸಿ ರಾಜ್ಯಕ್ಕಾಗಿ ಕೆಲಸ ಮಾಡಿದವರು ಎಂದು ಹೇಳಿದರು.

ಇನ್ನು ಕೆಂಗಲ್‌ ಹನುಮಂತಯ್ಯ ಅವರು ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರು ಅವರೊಂದಿಗೆ ಉತ್ತಮ ಸಂಬಂಧವನ್ನಿಟ್ಟುಕೊಂಡಿದ್ದರು. ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ಅವರ ಜನಪರ ಆಡಳಿತ ದಕ್ಷತೆಯಿಂದ ಕೂಡಿತ್ತು. ಅದನ್ನು ನಾವೆಲ್ಲರೂ ಅಳವಡಿಸಿಕೊಂಡು ಅವರು ಹಾಕಿರುವ ದಾರಿಯಲ್ಲಿಯೇ ಸಾಗುವ ಪ್ರಯತ್ನ ಮಾಡಬೇಕು. ಈ ಮೂಲಕವೇ ಅವರಿಗೆ ನಾವು ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

6 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

7 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

1 day ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 day ago