Mysore
18
few clouds

Social Media

ಗುರುವಾರ, 19 ಫೆಬ್ರವರಿ 2026
Light
Dark

ಕರ್ನಾಟಕ ಬಜೆಟ್‌| ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ 2025-26ನೇ ಸಾಲಿನ ಬಜೆಟ್‌ನಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ರಾಜ್ಯದಲ್ಲಿ ನೂತನ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.‌7) ಬಜೆಟ್‌ ಮಂಡಿಸಿದ ಅವರು, ರಾಜ್ಯದಲ್ಲಿ ನೂತನವಾಗಿ ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸಲು ಚಿಂತಿಸಲಾಗಿದ್ದು, ಕೆಲವು ನೂತನ ಕಾಲೇಜುಗಳನ್ನು ತೆರೆಯಲಾಗುವುದು ಎಂದರು.
ಅವುಗಳು ಈ ಕೆಳಕಂಡಂತಿವೆ.
1. ಗದಗ ಮೆಡಿಕಲ್ ಕಾಲೇಜಿನಲ್ಲಿ ಕ್ಯಾಥ್ಲ್ಯಾಬ್ ಮತ್ತು ಸೂಪರ್ ಸ್ಪೆಷಾಲಿಟಿ ಕಾರ್ಡಿಯಾಕ್ ಯೂನಿಟ್ ಪ್ರಾರಂಭ.
2. ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಿಎಂ ಭರ್ಜರಿ ಕೊಡುಗೆ.
3. ಕಲಬುರಗಿಯಲ್ಲಿ 92 ಕೋಟಿ ರೂ. ತಾಯಿ ಮತ್ತು ಮಕ್ಕಳ ಆಸ್ಪತ್ರೆ.
4. 304 ಕೋಟಿ ರೂ. ಹೃದ್ರೋಗ ಆಸ್ಪತ್ರೆ ಕಲಬುರಗಿಯಲ್ಲಿ ಸ್ಥಾಪನೆ.
5. 26 ಕೋಟಿ ರೂ. ವೆಚ್ಚದಲ್ಲಿ ನೆಪ್ರೊ-ಯುರಾಲಾಜಿ ಪೂರ್ಣಗೊಳಿಸಿ.
6. ಬೆಂಗಳೂರು ಸಾರ್ವಜನಿಕ ಕಟ್ಟಡ ಸೇವೆಗೆ ತೆರೆ.
7. ಬಾಗಲಕೋಟೆಯಲ್ಲಿ ರಾಜೀವ ಗಾಂಧಿ ವಿಶ್ವವಿದ್ಯಾಲಯದ ವೈದ್ಯಕೀಯ ಕಾಲೇಜು.
8. ಕೋಲಾರದಲ್ಲಿ ಖಾಸಗಿ-ಸಾರ್ವಜನಿಕ ಸಹಭಾಗಿತ್ವ ವೈದ್ಯಕೀಯ ಕಾಲೇಜು ಪ್ರಾರಂಭ.
9. ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜುದಲ್ಲಿ ಕ್ಯಾನ್ಸರ್ ಪತ್ತೆ ವಿಭಾಗ.
10. ಕರ್ನಾಟಕ ಬಜೆಟ್: 233 ಕೋಟಿ ರೂ. ಹಂಚಿಕೆ.
11. ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ 500 ಹಾಸಿಗೆ ಆಸ್ಪತ್ರೆ.
12. 2025-26ರಲ್ಲಿ ಸುಧಾರಿತ ಆರೋಗ್ಯ ಸೇವೆ ಯೋಜನೆಗಳು.
13. 22 ವೈದ್ಯಕೀಯ ಕಾಲೇಜುಗಳಲ್ಲಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸ್‌ಗಳು.
14. ಕುಳಗೇರಿ ಕ್ರಾಸ್ ಮತ್ತು ಚಿತ್ರದುರ್ಗದಲ್ಲಿ ಟ್ರಾಮಾ ಕೇರ್ ಕೇಂದ್ರಗಳು.
15. ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಎಂಡೋಕ್ರೈನಾಲಜಿ ಕೇಂದ್ರಗಳು.
16. 100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆ.
17. ಕೊಪ್ಪಳದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
18. ರಾಜೀವ ಗಾಂಧಿ ಆಸ್ಪತ್ರೆಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕ್ಯಾನ್ಸರ್ ಘಟಕ.
19. ಯಲಬುರ್ಗಾ, ಜೇವರ್ಗಿ, ಯಾದಗಿರಿಯಲ್ಲಿ 6 ಕೋಟಿ ರೂ. ನರ್ಸಿಂಗ್ ಕಾಲೇಜುಗಳು.
20. KKRDB ಅನುದಾನದಲ್ಲಿ Critical Vacancy ಹುದ್ದೆಗಳ ಭರ್ತಿ.

ವಿವಿಧ ಇಲಾಖೆಗಳ ಅಭಿವೃದ್ಧಿಗೆ ಅನುದಾನ ಮೀಸಲು

ವಕ್ಫ್ ಆಸ್ತಿಗಳ ನವೀಕರಣ ಮತ್ತು ದುರಸ್ತಿಗೆ 150 ಕೋಟಿ ರೂ. ಮೀಸಲಿಡಲಾಗಿದ್ದು, ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಟಾರ್ಗೆಟ್ ನೀಡಲಾಗಿದೆ. ಅಲ್ಲದೇ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ ನಕ್ಸಲ್ ಪ್ಯಾಕೇಜ್ ಆಗಿ 10 ಕೋಟಿ ಮೀಸಲಿರಿಸಲಾಗಿದೆ. ಅಲ್ಲದೇ ತೊಗರಿ ಬೆಳೆಗಾರರಿಗೆ ಬೆಲೆ ಏರಿಕೆ, ಪ್ರೋತ್ಸಾಹಧನ- ಸಿದ್ದರಾಮಯ್ಯ ಬಂಪರ್​ ಗಿಫ್ಟ್ ನೀಡಿದ್ದು, ಜೈನ, ಬೌದ್ಧ, ಸಿಖ್ಖ್ ಸಮುದಾಯಗಳ ಅಭಿವೃದ್ಧಿಗೆ 100 ಕೋಟಿ ರೂ. ಮೀಸಲಿರಿಸಲಾಗಿದೆ ಎಂದರು.

ಧಾರ್ಮಿಕ ದತ್ತಿ ಇಲಾಖೆಯ ಅರ್ಚಕರಿಗೆ ತಸ್ತೀಕ್ ಮೊತ್ತ ಹೆಚ್ಚಳ ಮಾಡಲಾಗಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಐದು ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಅವುಗಳನ್ನು ತರ್ಕ ಬದ್ಧಗೊಳಿಸಿ 5000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ರಾಜ್ಯದಲ್ಲಿ ಜಲಸಾರಿಗೆ ಕ್ಷೇತ್ರದಲ್ಲಿ ಹೊಸ ಯೋಜನೆ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ. ಮೀಸಲು. ಬ್ರ್ಯಾಂಡ್ ಬೆಂಗಳೂರು, 21 ಯೋಜನೆಗಳಿಗೆ ಅನುಮೋದನೆ ಹಾಗೂ ಚಿಕ್ಕಬಳ್ಳಾಪುರದಲ್ಲಿ ಹೊಸ ವಿಟಿಯು ಕಾಲೇಜು ಸ್ಥಾಪನೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಪ್ರವಾಸಿ ಕ್ಷೇತ್ರ

ರಾಜ್ಯದ ಪ್ರವಾಸಿ ಕ್ಷೇತ್ರಕ್ಕೆ 50 ಕೋಟಿ ರೂ. ಅನುದಾನ ನೀಡಲಾಗಿದ್ದು, ಅವುಗಳಲ್ಲಿ 10 ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿ ಮಾಡಲು ಚಿಂತಿಸಲಾಗಿದೆ. ಹೀಗಾಗಿ ಪ್ರವಾಸಿ ಮಿತ್ರರ ಸಂಖ್ಯೆ 1,000 ಹೆಚ್ಚಳ ಮತ್ತು 24X7 ಸಹಾಯವಾಣಿಗೆ ಕ್ರಮ, ಪ್ರವಾಸಿ ತಾಣಗಳ ಮಾಹಿತಿ ಸಂಗ್ರಹಕ್ಕೆ ONE-TAC Digital Grid ತೆರೆಯಲಾಗುವುದು. ಇನ್ನು ಲಕ್ಕುಂಡಿ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಸೇರ್ಪಡೆಗೆ ಕ್ರಮ ವಹಿಸಲಾಗುವುದು. ಜೊತೆಗೆ ಅಠಾರ ಕಚೇರಿಯಾಗಿರುವ ಮೈಸೂರಿನ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ರಾಜ್ಯ ಮಟ್ಟದ ವಸ್ತು ಸಂಗ್ರಹಾಲಯವನ್ನು ಅಭಿವೃದ್ಧಿಗೊಳಿಸಲಾಗುವುದು ಎಂದು ಹೇಳಿದರು.

Tags:
error: Content is protected !!