ಬೆಂಗಳೂರು: ಬೆಳಗಾವಿಯ ಸುವರ್ಣಸೌಧಕ್ಕೆ ಶಾಲಾ ಪ್ರವಾಸಕ್ಕೆಂದು ಆಗಮಿಸಿದ ವಿದ್ಯಾರ್ಥಿಗಳಿಗೆ 12ನೇ ಶತಮಾನದಲ್ಲಿ ಶರಣರು ಸಾರಿದ ಬದುಕಿನ ಹಕ್ಕುಗಳೇ ಇಂದು ಸಂವಿಧಾನದ ಆಶಯಗಳಾಗಿವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಶಾಲಾ ಪ್ರವಾಸಕ್ಕೆಂದು ಬೆಳಗಾವಿಯ ಸುವರ್ಣಸೌಧಕ್ಕೆ ಭೇಟಿ ನೀಡಿದ ವಿದ್ಯಾರ್ಥಿಗಳಿಗೆ 12ನೇ ಶತಮಾನದಲ್ಲಿಯೇ ಪ್ರಜಾಪ್ರಭುತ್ವ ಪರಿಕಲ್ಪನೆಯ ಮೇಲೆ ರೂಪುಗೊಂಡಿದ್ದ ಅನುಭವ ಮಂಟಪದ ಬಗ್ಗೆ ವಿವರಿಸಲಾಯಿತು ಎಂದು ಹೇಳಿದ್ದಾರೆ.
12ನೇ ಶತಮಾನದಲ್ಲಿನ ಶರಣರು ಸಾರಿದ ಸಮಾನತೆ, ಜಾತ್ಯತೀತತೆ, ಸಹಬಾಳ್ವೆ, ವ್ಯಕ್ತಿ ಸ್ವಾತಂತ್ರ್ಯ ಘನತೆಯ ಬದುಕಿನ ಹಕ್ಕುಗಳೇ ಇಂದಿನ ನಮ್ಮ ಸಂವಿಧಾನದ ಆಶಯಗಳಾಗಿವೆ. ಇವು ಪ್ರತಿಯೊಬ್ಬರ ಆಶಯಗಳಾಗಬೇಕು ಎಂದಿದ್ದಾರೆ.
ವಿಶ್ವಮಾನವರಾಗಿ ಹುಟ್ಟುವ ಮಕ್ಕಳು ಜಾತಿ, ಧರ್ಮ, ವರ್ಣ, ಕಂದಾಚಾರ ಮುಂತಾದ ಸಂಕುಚಿತ ಚಿಂತನೆಯ ಪ್ರಭಾವಕ್ಕೆ ಒಳಗಾಗಿ ಅಲ್ಪ ಮಾನವರಾಗುತ್ತಿದ್ದಾರೆ. ಹೀಗಾಗಿ ಮಹಾಪುರುಷರ ಜೀವನಾದರ್ಶಗಳನ್ನು ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೇ ತಿಳಿಸುವ ಮೂಲಕ ಅವರನ್ನು ಈ ಜಾತಿ, ಧರ್ಮ, ಮೂಢನಂಬಿಕೆಗಳ ಅಲ್ಪತನದಿಂದ ಮುಕ್ತಗೊಳಿಸಿ ವಿಶ್ವಮಾನವರನ್ನಾಗಿಸೋಣ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…
ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…