Mysore
19
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಕರ್ನಾಟಕ ಬಜೆಟ್‌| ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗೆ 8 ಸಾವಿರ ಕೋಟಿ ರೂ. ಮೀಸಲು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ಬಜೆಟ್‌ 2025-26ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿನ ರಸ್ತೆ, ನೀರು ಮತ್ತು ಇನ್ನಿತರ ಮೂಲ ಸೌಕಾರ್ಯ ಕಲ್ಪಿಸುವ ಉದ್ದೇಶದಿಂದ ಎಂಟು ಸಾವಿರ ಕೋಟಿ ರೂ. ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್.‌7) ಬಜೆಟ್‌ ಮಂಡಿನೆ ಮಾಡಿದ ಅವರು, ಮುಖ್ಯಮಂತ್ರಿ ಕ್ಷೇತ್ರಾಭಿವೃದ್ಧಿ ಯೋಜನೆಯಡಿ ಅನುದಾನ ನೀಡಲು ತೀರ್ಮಾನಿಸಲಾಗಿದ್ದು, 228 ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗಾಗಿ 8 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದರು.

ಐಟಿ-ಬಿಟಿ ಕ್ಷೇತ್ರದ ನೀತಿಗಳಲ್ಲಿ ಬದಲಾವಣೆ

ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರಗಳ ಬೆಳವಣಿಗೆಗೆ ನೀತಿಗಳನ್ನು ಬದಲಾವಣೆ ಮೂಲಕ ಹೆಚ್ಚಿನ ಒತ್ತು ನೀಡಲಾಗುವುದು. ಇದರಿಂದ ಕೈಗಾರಿಕೆಗಳ ಬೆಳವಣಿಗೆ ಮತ್ತು ಉದ್ಯೋಗ ಸೃಜನೆಗೆ ಹೆಚ್ಚಿನ ಒತ್ತು ಸಿಗಲಿದೆ ಎಂದರು.

ಇನ್ನು ಆಡಳಿತ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಕೌನ್ಸಲಿಂಗ್‌ ಪ್ರಕ್ರಿಯೆ ಜಾರಿ ಮಾಡಲಾಗುತ್ತಿದೆ. ಈ ಮೂಲಕ ಸಾರ್ವಜನಿಕರ ಸಮಸ್ಯೆಗಳು ತ್ವರತಗತಿಯಲ್ಲಿ ಪರಿಹರಿಸಲು ನೆರವಾಗಲಿದೆ. ಕಳೆದ ವರ್ಷ ರಾಜ್ಯ ಸರ್ಕಾರದ ಫಲಾನುಭವಿಗಳ ಖಾತೆಗೆ ಮಧ್ಯವರ್ತಿಗಳ ಹಸ್ತಕ್ಷೇಪವಲ್ಲದೆ 1 ಕೋಟಿ ರೂ. ಗಳನ್ನು ನೇರವಾಗಿ ವರ್ಗಾಯಿಸಲಾಗಿದೆ. ಅಲ್ಲದೇ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 233 ಕೋಟಿ ರೂ. ಮೊತ್ತವನ್ನು ನೇವಾಗಿ ವರ್ಗಾಯಿಸಲಾಗಿದೆ ಎಂದು ಹೇಳಿದರು.

Tags:
error: Content is protected !!