ಬೆಂಗಳೂರು: ಕರ್ನಾಟಕ ಬಜೆಟ್ 2025-26ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿನ ರಸ್ತೆ, ನೀರು ಮತ್ತು ಇನ್ನಿತರ ಮೂಲ ಸೌಕಾರ್ಯ ಕಲ್ಪಿಸುವ ಉದ್ದೇಶದಿಂದ ಎಂಟು ಸಾವಿರ ಕೋಟಿ ರೂ. ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು(ಮಾರ್ಚ್.7) ಬಜೆಟ್ ಮಂಡಿನೆ ಮಾಡಿದ ಅವರು, ಮುಖ್ಯಮಂತ್ರಿ ಕ್ಷೇತ್ರಾಭಿವೃದ್ಧಿ ಯೋಜನೆಯಡಿ ಅನುದಾನ ನೀಡಲು ತೀರ್ಮಾನಿಸಲಾಗಿದ್ದು, 228 ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿಗಾಗಿ 8 ಸಾವಿರ ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ ಎಂದರು.
ಐಟಿ-ಬಿಟಿ ಕ್ಷೇತ್ರದ ನೀತಿಗಳಲ್ಲಿ ಬದಲಾವಣೆ
ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರಗಳ ಬೆಳವಣಿಗೆಗೆ ನೀತಿಗಳನ್ನು ಬದಲಾವಣೆ ಮೂಲಕ ಹೆಚ್ಚಿನ ಒತ್ತು ನೀಡಲಾಗುವುದು. ಇದರಿಂದ ಕೈಗಾರಿಕೆಗಳ ಬೆಳವಣಿಗೆ ಮತ್ತು ಉದ್ಯೋಗ ಸೃಜನೆಗೆ ಹೆಚ್ಚಿನ ಒತ್ತು ಸಿಗಲಿದೆ ಎಂದರು.
ಇನ್ನು ಆಡಳಿತ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಕೌನ್ಸಲಿಂಗ್ ಪ್ರಕ್ರಿಯೆ ಜಾರಿ ಮಾಡಲಾಗುತ್ತಿದೆ. ಈ ಮೂಲಕ ಸಾರ್ವಜನಿಕರ ಸಮಸ್ಯೆಗಳು ತ್ವರತಗತಿಯಲ್ಲಿ ಪರಿಹರಿಸಲು ನೆರವಾಗಲಿದೆ. ಕಳೆದ ವರ್ಷ ರಾಜ್ಯ ಸರ್ಕಾರದ ಫಲಾನುಭವಿಗಳ ಖಾತೆಗೆ ಮಧ್ಯವರ್ತಿಗಳ ಹಸ್ತಕ್ಷೇಪವಲ್ಲದೆ 1 ಕೋಟಿ ರೂ. ಗಳನ್ನು ನೇರವಾಗಿ ವರ್ಗಾಯಿಸಲಾಗಿದೆ. ಅಲ್ಲದೇ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 233 ಕೋಟಿ ರೂ. ಮೊತ್ತವನ್ನು ನೇವಾಗಿ ವರ್ಗಾಯಿಸಲಾಗಿದೆ ಎಂದು ಹೇಳಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…