ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮಾರ್ಚ್.7 ರಂದು ಮಂಡನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು(ಫೆಬ್ರವರಿ.17) ಬಜೆಟ್ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಅವರು, ಮಾರ್ಚ್.3 ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಲಿದೆ. ಅದೇ ದಿನದಂದೇ ರಾಜ್ಯಪಾಲರು ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್.7 ರಂದು ಬಜೆಟ್ ಮಂಡನೆ ಮಾಡಲಾಗುವುದು ಎಂದು ಹೇಳಿದರು.
ಇನ್ನು ಬಜೆಟ್ ಮಂಡನೆಯಾದ ನಂತರ ಮೂಉ ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲೆ ಅಧಿವೇಶನದಲ್ಲಿ ಚರ್ಚೆಯಾಗಲಿದೆ. ಅಲ್ಲದೇ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಂಪೂರ್ಣವಾಗಿ ಎಲ್ಲಾ ಕ್ಷೇತ್ರಗಳ ಬಗ್ಗೆ ಯೋಜನೆ ರೂಪಿಸಲು ಚಿಂತಸಲಾಗಿದೆ ಎಂದರು.