ಬೆಂಗಳೂರು: ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಕಾಂಗ್ರೆಸ್ ಸರ್ಕಾರದ ಗುರಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯವಾಗಿದೆ ಎಂದು ಪ್ರಶಂಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಸುಮಾರು 75 ಕೋಟಿ ರೂ.ಗೂ ಅಧಿಕ ಮೌಲ್ಯದ 37 ಕೆ.ಜಿ. ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದು ಹೇಳಿದ್ದಾರೆ.
ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ ಡ್ರಗ್ಸ್ ಜಾಲವೊಂದನ್ನು ಪತ್ತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…