ರಾಜ್ಯ

ನಮ್ಮ ರಾಜ್ಯದ ಈ ಬಾರಿಯ ಬಜೆಟ್‌ ದೇಶದಲ್ಲಿಯೇ 5ನೇ ದೊಡ್ಡ ಬಜೆಟ್‌ ಆಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ರಾಜ್ಯದ ಈ ಬಾರಿಯ ಬಜೆಟ್‌ ದೇಶದಲ್ಲಿಯೇ 5ನೇ ದೊಡ್ಡ ಬಜೆಟ್‌ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಮಾರ್ಚ್‌.21) ಬಜೆಟ್‌ ಮೇಲಿನ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸಿದ ಅವರು, 2025-26ನೇ ಸಾಲಿನಲ್ಲಿ 4,09,549 ಕೋಟಿ ರೂ. ಗಾತ್ರದ ಬಜೆಟ್ ಅನ್ನು ನಾನು ಮಂಡಿಸಿದ್ದೇನೆ. 2024-25ನೇ ಸಾಲಿನ ಆಯವ್ಯಯಕ್ಕೆ ಹೋಲಿಸಿದರೆ 2025-26ನೇ ಸಾಲಿನಲ್ಲಿ ನಮ್ಮ ರಾಜ್ಯದ ಬಜೆಟ್ ಗಾತ್ರ ಶೇ.10.3 ರಷ್ಟು ಹೆಚ್ಚಿನ ಬೆಳವಣಿಗೆ ಕಂಡಿದೆ. ಜನಸಂಖ್ಯೆಯ ಗಾತ್ರದಲ್ಲಿ ಕರ್ನಾಟಕವು 8ನೇ ಸ್ಥಾನದಲ್ಲಿದೆ ಎಂದರು.

ತೆರಿಗೆ ಸಂಗ್ರಹಿಸಿಕೊಡುವ ವಿಚಾರದಲ್ಲಿ ಕರ್ನಾಟಕವು 2ನೇ ಸ್ಥಾನದಲ್ಲಿದೆ. ಜಿಎಸ್‌ಡಿಪಿಯಲ್ಲಿ ಕರ್ನಾಟಕವು ಮಹಾರಾಷ್ಟ್ರ, ತಮಿಳುನಾಡಿನ ನಂತರ 3ನೇ ಸ್ಥಾನದಲ್ಲಿದೆ. ಆದರೆ, 2025-26ನೇ ಸಾಲಿನ ನಮ್ಮ ಬಜೆಟ್ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡಿನ ನಂತರ 5ನೇ ದೊಡ್ಡ ಬಜೆಟ್ ಆಗಿದೆ ಎಂದು ಹೇಳಿದರು.

ಇನ್ನು, 2025-26ನೇ ಸಾಲಿಗೆ ಸಂಬಂಧಿಸಿದಂತೆ ಕೇಂದ್ರದ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಗಾತ್ರ 50.65 ಲಕ್ಷ ಕೋಟಿ ರೂ. 2024-25 ರಲ್ಲಿ 48.21 ಲಕ್ಷ ಕೋಟಿ ರೂ.ಗಳಷ್ಟಿತ್ತು. ಕೇಂದ್ರದ ಬಜೆಟ್ ಬೆಳವಣಿಗೆ ಶೇ. 5.06 ರಷ್ಟು ಮಾತ್ರ. ಇದರಲ್ಲಿ ಹಣದುಬ್ಬರವನ್ನು ಕಳೆದರೆ, ಕೇಂದ್ರದ ಬಜೆಟ್ಟಿನ ಗಾತ್ರ ನಕಾರಾತ್ಮಕವಾಗುತ್ತದೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಕೇರ್ ಟೇಕರ್ ಕೆಲಸಕ್ಕೆ ಸೇರಿ ಮನೆ ದರೋಡೆ; ಆರೋಪಿ ಬಂಧನ

ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…

1 hour ago

ಮಹದೇಶ್ವರ ಬೆಟ್ಟ : ವಿವಿಧ ಸೇವೆಗಳಿಂದ 1.16 ಕೋಟಿ ಸಂಗ್ರಹ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…

1 hour ago

ಹೊರ್ಮುಜ್‌ ಜಲಸಂಧಿ ಶತ್ರುಗಳಿಗೆ ಮಾತ್ರ ಮುಚ್ಚಿದೆ : ಇರಾನ್

ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…

2 hours ago

ಹುಣಸೂರು | ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆ

ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…

2 hours ago

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

3 hours ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

3 hours ago