ಮೈಸೂರು: ಉದಯಗಿರಿ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜೊತೆ ಚರ್ಚಿಸಿದ್ದೇನೆ. ಈ ವೇಳೆ ಅವರಿಗೆ ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. ಕಾನೂನು ಕೈಗೆತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು ಎಂದು ಸಲಹೆ ನೀಡಿಲಾಗಿದೆ ಎಂದು ತಿಳಿಸಿದ್ದಾರೆ.
ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು, ಇದರ ಜೊತೆಗೆ ತಪ್ಪು ಮಾಡದವರಿಗೆ ಕೂಡ ತೊಂದರೆ ಆಗಬಾರದು. ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂಬ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದೇನೆ ಎಂದು ಹೇಳಿದ್ದಾರೆ.
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…