ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 16ನೇ ಬಜೆಟ್ ಮಂಡಿಸುತ್ತಿದ್ದು, ಈ ಬಾರಿಯ ಬಜೆಟ್ ರಾಜ್ಯದ ಸಮಗ್ರ ಅಭಿವೃದ್ಧಿಗೆ ದಾರಿದೀಪವಾಗಲಿದೆ ಎಂದು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ ಎಂದಿದ್ದಾರೆ.
ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎಂದು ಹೇಳಿದ್ದಾರೆ.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…