ಬೆಂಗಳೂರು: ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್‌ವೆಲ್ ಕೊರೆಸಿ, ಸಮೃದ್ಧವಾದ ನೀರು ಪಡೆದಿದ್ದಾರೆ ಎಂದು ಸುದ್ದಿ ಕೇಳಿ ಸಂತಸವಾಗಿದೆ ಎಂದಿದ್ದಾರೆ.
ನಾಡಿನ ಬಡಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಈ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವುದು ಯೋಜನೆಯನ್ನು ಜಾರಿಗೆ ಕೊಟ್ಟ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಅತ್ತೆ – ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ. ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ, ಗೃಹಲಕ್ಷ್ಮಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷ್ಮಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ಹೇಳಿದ್ದಾರೆ.
ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…
ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…
ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…