ರಾಜ್ಯ

ಗೃಹಲಕ್ಷ್ಮೀ ಹಣದಿಂದ ಬೋರ್‌ವೆಲ್‌ ಕೊರೆಸಿರುವ ಮಹಿಳೆಯರು: ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಶ್ಲಾಘನೆ

ಬೆಂಗಳೂರು: ನಮ್ಮ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಮಾಲದಾರ ಓಣಿಯ ಅತ್ತೆ ಮಾಬುಬೀ ಹಾಗೂ ಸೊಸೆ ರೋಷನ್ ಬೇಗಂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮಿ ಹಣ ಕೂಡಿಟ್ಟು ಕೃಷಿ ಭೂಮಿಗೆ ಬೋರ್‌ವೆಲ್ ಕೊರೆಸಿ, ಸಮೃದ್ಧವಾದ ನೀರು ಪಡೆದಿದ್ದಾರೆ ಎಂದು ಸುದ್ದಿ ಕೇಳಿ ಸಂತಸವಾಗಿದೆ ಎಂದಿದ್ದಾರೆ.

ನಾಡಿನ ಬಡಕುಟುಂಬಗಳಿಗೆ ಆರ್ಥಿಕ ಶಕ್ತಿ ತುಂಬಿ, ಅವರನ್ನು ಸ್ವಾವಲಂಬಿಗಳನ್ನಾಗಿಸುವ ಈ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವುದು ಯೋಜನೆಯನ್ನು ಜಾರಿಗೆ ಕೊಟ್ಟ ನನ್ನಲ್ಲಿ ಸಂತೃಪ್ತಭಾವ ಮೂಡಿಸಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಅತ್ತೆ – ಸೊಸೆಯ ನಡುವೆ ಜಗಳ ಆರಂಭವಾಗುತ್ತದೆ. ಸಂಸಾರಗಳು ಒಡೆಯುತ್ತವೆ ಎಂದು ಟೀಕಿಸಿದ ಜನರಿಗೆ ಬಾರಿಸಿದ ತಪರಾಕಿ ಇದು. ಬೆಳಕಿಗೆ ಬಾರದ ಇಂತಹ ಇನ್ನೂ ಸಾವಿರಾರು ಯಶೋಗಾಥೆಗಳಿವೆ, ಗೃಹಲಕ್ಷ್ಮಿ ನಾಡಿನ ತಾಯಂದಿರ ಬಾಳಿಗೆ ಅಕ್ಷರಶಃ ಭಾಗ್ಯಲಕ್ಷ್ಮಿಯಾಗಿದೆ ಎನ್ನುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

16 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

17 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

17 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

18 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

22 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

22 hours ago