ರಾಜ್ಯ

ಕೇರಳ ಸಿಎಂ, ಕೆ.ಸಿ.ವೇಣುಗೋಪಾಲ್‌ ಜೊತೆ ವೇದಿಕೆ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ಒಂದೇ ವೇದಿಕೆ ಹಂಚಿಕೊಂಡರು.

ಕೇರಳದಲ್ಲಿ ನಡೆದ ಶಿವಗಿರಿ ಮಠದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಕರ್ನಾಟಕ ಕಾಂಗ್ರೆಸ್ಸಿನ ಉಸ್ತುವಾರಿ ನಾಯಕರು ಆಗಿರುವ ಕೇರಳದವರೇ ಆದ ಕೆ.ಸಿ. ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದೇ ವೇಳೆ ಸಿದ್ದರಾಮಯ್ಯ ಶಿವಗಿರಿ ಮಠದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ಮಠಾಧೀಶರಾದ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮೀಜಿ ಉಪಸ್ಥಿತರಿದ್ದರು. ಇದೇ ವೇಳೆ ಕೇರಳದ ಮುಖ್ಯಮಂತ್ರಿ ಪೀಣರಾಯಿ ವಿಜಯನ್ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಉಭಯ ಕುಶಲೋಪರಿ ವಿಚಾರಿಸಿದರು.

ಕೋಗಿಲು ಕ್ರಾಸ್ ಬಳಿ ಘನ ತ್ಯಾಜ್ಯ ವಿಲೇವಾರಿಗಾಗಿ ಸರ್ಕಾರ ಸ್ವಾಧೀನ ಪಡಿಸಿಕೊಂಡಿದ್ದ ಭೂಮಿಯಲ್ಲಿ ಕೇರಳ, ತೆಲಂಗಾಣ ಹಾಗೂ ಇತರೆಡೆಗಳಿಂದ ಆಗಮಿಸಿದ ಕೆಲವರು ಭೂ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿಕೊಂಡಿದ್ದರು. ಇದರ ವಿರುದ್ದ ಕ್ರಮ ಕೈಗೊಂಡ ಗ್ರೇಟರ್ ಬೆಂಗಳೂರು ಅಧಿಕಾರಿಗಳು ಆಕ್ರಮ ನಿರ್ಮಾಣಗಳನ್ನು ಧ್ವಂಸಗೊಳಿಸಿ ಒತ್ತುವರಿಯನ್ನು ತೆರವು ಮಾಡಿದ್ದರು. ಅಲ್ಲಿನ ನಿವಾಸಿಗಳು ಸರಕಾರದ ಕ್ರಮವನ್ನು ವಿರೋಧಿಸಿ ಸ್ಥಳದಲ್ಲೇ ಪ್ರತಿಭಟನೆ ನಡೆಸಿದ್ದಲ್ಲದೆ, ತಾತ್ಕಾಲಿಕ ಟೆಂಟ್‌ಗಳನ್ನು ನಿರ್ಮಿಸಿಕೊಂಡು ತಮ್ಮ ಪ್ರತಿರೋಧವನ್ನು ವ್ಯಕ್ತಪಡಿಸಿದ್ದರು.

ಎಂಟು ದಿನಗಳ ಬಳಿಕ ಪೀಣರಾಯಿ ವಿಜಯನ್ ಅವರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿ, ಕರ್ನಾಟಕದ ಸರ್ಕಾರ ಉತ್ತರ ಪ್ರದೇಶದ ಬಿಜೆಪಿ ಸರ್ಕಾರದಂತೆ ಬುಲ್ಡೋ ಜೋರ್ ನೀತಿಗಳನ್ನು ಅನುಸರಿಸುತ್ತಿದೆ ಎಂದು ಟೀಕಿಸಿದರು. ಅನಂತರದ ಬೆಳವಣಿಗೆಯಲ್ಲಿ ಕೇರಳದ ಕೆಲ ಶಾಸಕರು, ಸಂಸದರು ಸ್ಥಳಕ್ಕೆ ಭೇಟಿ ನೀಡಿ ಒತ್ತುವರಿ ತೆರವು ಕಾರ್ಯಾಚರಣೆಯಿಂದ ತೊಂದರೆಗೊಳಗಾದವರ ಕಷ್ಟ- ಸುಖಗಳನ್ನು ವಿಚಾರಿಸಿದರು. ಇದು ರಾಜಕೀಯ ತಿರುವನ್ನು ಪಡೆದುಕೊಂಡಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶ ಮಾಡಿ, ಉಪಮುಖ್ಯಮಂತ್ರಿಯಾಗಿ ಡಿ.ಕೆ .ಶಿವಕುಮಾರ್ ಅವರ ಜೊತೆ ಗ್ರೇಟರ್ ಬೆಂಗಳೂರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಒತ್ತುವರಿಯಿಂದ ಸಂತ್ರಸ್ಥರಾದ ನೈಜ್ಯ ಮಾಲೀಕರುಗಳಿಗೆ ಬದಲಿ ಮನೆಯಲ್ಲಿ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾರ್ಕಹಳ್ಳಿ ಬಸವೇಶ್ವರ ಜಾತ್ರೆ: ಇಂದು ಕೊಂಡೋತ್ಸವ

ಅಣ್ಣೂರು ಸತೀಶ್ ನಾಳೆ ಸಂಜೆ ವಿಜೃಂಭಣೆಯ ರಥೋತ್ಸವ,ಅನ್ನಸಂತರ್ಪಣೆ  ಭಾರತೀನಗರ: ಕಾರ್ಕಹಳ್ಳಿ ಶ್ರೀ ಬಸವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.೩ರ…

6 mins ago

‘ಮಕ್ಕಳ ವ್ಯಕ್ತಿತ್ವ ವಿಕಸನಕ್ಕಾಗಿ ಶಾಲೆಗಳಲ್ಲಿ ರಂಗಶಿಕ್ಷಣ ನೀಡಿ’

ಗಿರೀಶ್ ಹುಣಸೂರು ಕೆಪಿಎಸ್, ಪಿಎಂಶ್ರೀ ಶಾಲೆಗಳಲ್ಲಿ ರಂಗಶಿಕ್ಷಕರ ನೇಮಕಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸು ಮೈಸೂರು: ಇಂದಿನ ಮಕ್ಕಳಲ್ಲಿ…

11 mins ago

1000 ಕೋಟಿ ರೂ. ಸಂಪನ್ಮೂಲ ಕ್ರೋಢೀಕರಣಕ್ಕೆ ಎಂಡಿಎ ಪ್ಲಾನ್!

ಕೆ.ಬಿ.ರಮೇಶನಾಯಕ ಮೈಸೂರು: ಹಲವು ಅವ್ಯವಹಾರಗಳಿಂದಾಗಿ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿ ಯಾಗಿದ್ದ ಹಿಂದಿನ ಮುಡಾ, ಎಂಡಿಎ ಆಗಿ ಪರಿವರ್ತನೆಯಾದ…

15 mins ago

ಮಾನವತೆಯ ಸಂದೇಶ ಸಾರಿದ ಯತೀಂದ್ರ

ಡಾ.ಎಸ್‌. ಕೃಷ್ಣಪ್ಪ ಕಿತ್ತೂರು  ಇಂದು ಕೈವಾರ ತಾತಯ್ಯ ಅವರ ಜಯಂತಿ ‘ಉತ್ತಮ ಕುಲವೆಂದು ಹೇಳುವ ಮಾತು ಯುಕ್ತವಲ್ಲಣ್ಣ’... ೧೮ನೇ ಶತಮಾ…

20 mins ago

ಪ್ರಮುಖ ತಂತ್ರಜ್ಞಾನ ಸ್ಟಾರ್ಟ್ ಅಪ್‌ಗಳ ಹೋರಾಟ

ವಿಶ್ವಪ್ರಸಾದ್ ಆಳ್ವ ಒಂದೆರಡು ವರ್ಷಗಳ ಹಿಂದೆ ದೇಶದ ಹಣಕಾಸು ಸಚಿವರು ಮೂಲ ತಂತ್ರಜ್ಞಾನ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ (ಆರ್…

25 mins ago

ಇರಾನ್ ಸಂಘರ್ಷದ ಪೂರ್ವಾಪರ

ಪ್ರೊ.ಪ್ರೇಮ ಶೇಖರ ಒಂದೂವರೆ ತಿಂಗಳಿನಿಂದ ಜಗತ್ತು ಆತಂಕದಿಂದ ಎದುರು ನೋಡುತ್ತಿದ್ದಂತಹ ಯುದ್ಧ ಪಶ್ಚಿಮ ಏಷ್ಯಾದಲ್ಲಿ ಪ್ರಾರಂಭವಾಗಿದೆ. ಜನವರಿ ಮೊದಲ ಭಾಗದಲ್ಲಿ…

29 mins ago