Mysore
29
few clouds

Social Media

ಮಂಗಳವಾರ, 27 ಜನವರಿ 2026
Light
Dark

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸೊಕ್ಕು ಮುರಿಯಬೇಕು ಎಂದು ಹೇಳಿಕೆ ನೀಡಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಮೂರು ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸವಿತ್ತು. ಗೆದ್ದಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಇನ್ನು ಸಿದ್ದರಾಮಯ್ಯಗೆ ಅಹಂಕಾರ, ಸಿಎಂ ಸೊಕ್ಕು ಮುರಿಯಬೇಕು ಎಂದು ದೇವೇಗೌಡರು ಹೇಳಿದ್ದರು. ಅಧಿಕಾರದಿಂದ ಕಾಂಗ್ರೆಸ್ ತೆಗೆಯುವುದೇ ನನ್ನ ಉದ್ದೇಶ ಎಂದಿದ್ದರು. ಆದರೆ ಕಳೆದ 40 ವರ್ಷಗಳಿಂದ ಎಂದೂ ಕೂಡ ದರ್ಪ ತೋರಿಲ್ಲ. ಅಧಿಕಾರದಲ್ಲಿ ಇದ್ದರೂ, ಇಲ್ಲದಿದ್ದರೂ ಒಂದೇ ರೀತಿ ಇರುತ್ತೇನೆ. ಅಳೋದನ್ನು ದೊಡ್ಡಗೌಡರ ಕುಟುಂಬ ಅಭ್ಯಾಸ ಮಾಡಿಕೊಂಡಿದ್ದಾರೆ ಎಂದು ದೇವೇಗೌಡರ ಕುಟುಂಬದ ವಿರುದ್ಧ ಲೇವಡಿ ಮಾಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬಿಜೆಪಿಯವರು ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡಿದರು. ಮುಡಾ ಹಾಗೂ ವಾಲ್ಮೀಕಿ ಪ್ರಕರಣಗಳಲ್ಲಿ ನನ್ನ ಪಾತ್ರವಿದೆ ಎಂದು ಪದೇ ಪದೇ ಆರೋಪಿಸುತ್ತಿದ್ದರು. ವಕ್ಫ್‌ ವಿವಾದದಲ್ಲಿ ಕೋಮುವಾದ ಸೃಷ್ಟಿಸಿದ್ದರು. ಆದರೆ ಜನತೆ ಈ ಎಲ್ಲಾ ಆರೋಪಗಳನ್ನು ತಿರಸ್ಕರಿಸಿ ನಮಗೆ ಗೆಲುವು ತಂದುಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

 

Tags:
error: Content is protected !!