Mysore
25
scattered clouds

Social Media

ಮಂಗಳವಾರ, 27 ಜನವರಿ 2026
Light
Dark

ಪ್ರಧಾನಿ ಹುದ್ದೆಗೆ ಅರ್ಹರಾದ ನಾಯಕರು ರಾಜ್ಯದಲ್ಲಿ ಬಹಳಷ್ಟಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿ ಇಲ್ಲ ಎಂಬುದಾಗಿ ನಾನು ಹೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ (ಮೇ.23) ಸ್ಪಷ್ಟಪಡಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಸಿಎಂ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಈ ಸ್ಪಷ್ಟನೆ ನೀಡಿದರು. ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ಪತ್ರಕರ್ತರೊಬ್ಬರು ಪ್ರಧಾನಿ ಹುದ್ದೆಗೆ ನೀವು ಕರ್ನಾಟಕದಿಂದ ಅಭ್ಯರ್ಥಿ ಆಗುವಿರೇ ಎಂದು ಪ್ರಶ್ನಿಸಿದರು.

ಕರ್ನಾಟಕದಿಂದ ನಾನು ಪ್ರಧಾನಿ ಅಭ್ಯರ್ಥಿ ಅಲ್ಲ. ಆಗುವುದೂ ಇಲ್ಲ ಎಂದು ಹೇಳಿದ್ದೆ. ಆದರೆ ಕೆಲ ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗಿದೆ. ಪ್ರಧಾನಿ ಹುದ್ದೆಗೆ ಅರ್ಹರಾದವರು, ಸಮರ್ಥರು ನಮ್ಮ ರಾಜ್ಯದಲ್ಲಿ ಬಹಳ ನಾಯಕರಿದ್ದಾರೆ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.

Tags:
error: Content is protected !!