cm siddaramaiah
ಬೆಂಗಳೂರು : ಮಕ್ಕಳು ಎಷ್ಟು ಭಾಷೆ ಕಲಿತರೂ ಒಳ್ಳೆಯದೆ. ಹೆಚ್ಚೆಚ್ಚು ಭಾಷೆ ಕಲಿತು ಕನ್ನಡದಲ್ಲಿ ಮುಂದಿರಿ ಎಂದು ಸಿಎಂ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಶಾಲಾ ಶೈಕ್ಷಣಿಕ ವರ್ಷದ ಪುನರಾರಂಭದ ಪ್ರಯುಕ್ತ ಆಡುಗೋಡಿಯ ಕರ್ನಾಟಕ ಸರ್ಕಾರಿ ಕನ್ನಡ ಶಾಲೆಯಲ್ಲಿ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಶಾಲಾ ಕೊಠಡಿಗಳ ಪರಿಶೀಲನೆ ನಡೆಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕನ್ನಡದಲ್ಲಿ ಕಲಿತರೆ ಮಕ್ಕಳು ಪ್ರತಿಭಾವಂತರಾಗುವುದಿಲ್ಲ ಎನ್ನುವುದು ತಪ್ಪು. ವೈಜ್ಞಾನಿಕ ಶಿಕ್ಷಣ ಪಡೆದು, ವೈಜ್ಞಾನಿಕ ಗುಣಮಟ್ಟ ಬೆಳೆಸಿಕೊಂಡರೆ ಮಕ್ಕಳು ಉತ್ತಮ ಪ್ರತಿಭಾವಂತರಾಗುತ್ತಾರೆ. ಆದ್ದರಿಂದ ಸರ್ಕಾರಿ ಶಾಲೆಗಳ ಹಾಜರಾತಿ ಹೆಚ್ಚಾಗಬೇಕು ಎಂದು ಒತ್ತಿ ಹೇಳಿದರು.
ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಈ ಬಾರಿಯೂ 725 ಕೋಟಿ ಹಣ ಕೊಟ್ಟಿದ್ದೇವೆ. ಕಳೆದ ವರ್ಷವೂ ಕೊಟ್ಟಿದ್ದೇವೆ. ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ ಎಂದರು.
ಗ್ರೇಸ್ ಮಾರ್ಕ್ಸ್ ಇಲ್ಲದೆ ಮಕ್ಕಳು ಉತ್ತಮ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಪ್ರಯತ್ನಿಸುತ್ತಿದೆ. ಎರಡನೇ ಮತ್ತು ಮೂರನೇ ಸಪ್ಲಿಮೆಂಟರಿ ಪರೀಕ್ಷೆಗಳಿಗೆ ಶುಲ್ಕ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವ ರಾಮಲಿಂಗಾರೆಡ್ಡಿಯವರ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು ಉತ್ತಮ ಗುಣಮಟ್ಟ ಕಾಯ್ದುಕೊಂಡಿವೆ. ಇದೇ ಗುಣಮಟ್ಟ ಇಡೀ ರಾಜ್ಯಾದ್ಯಂತ ಆಗಬೇಕು ಎಂದು ಕರೆ ನೀಡಿದರು.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…