Mysore
25
broken clouds

Social Media

ಭಾನುವಾರ, 25 ಜನವರಿ 2026
Light
Dark

ಕೊಟ್ಟ ಭರವಸೆ ಈಡೇರಿಸಿ ನುಡಿದಂತೆ ನಡೆದಿದ್ದೇವೆ: ಸಿಎಂ ಸಿದ್ದರಾಮಯ್ಯ

ಹೊಸಪೇಟೆ: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 1,11,111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದರು. ಸಿದ್ದರಾಮಯ್ಯ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.

ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದರು.

ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂದರು.

Tags:
error: Content is protected !!