Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಗಾಂಧಿ ಸರ್ವೋದಯ, ಅಂಬೇಡ್ಕರ್‌ ಅಂತ್ಯೋದಯವೇ ನಮ್ಮ ಸರ್ಕಾರದ ಧ್ಯೇಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಸರ್ವೋದಯ, ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಅಂತ್ಯೋದಯವೇ ನಮ್ಮ ಸರ್ಕಾರದ ಧ್ಯೇಯ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಗಾಂಧೀಜಿ ಜಯಂತಿ ಪ್ರಯುಕ್ತ ಇಂದು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಆಯೋಜಿಸಿದ್ದ ಗಾಂಧೀಜಿ ಜನ್ಮ ದಿನಾಚರಣೆ ಮತ್ತು ಸ್ವಚ್ಛತಾ ಆಂದೋಲನ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಹಾತ್ಮ ಗಾಂಧೀಜಿ ಮೊದಲು ಗ್ರಾಮೀಣ ಭಾರತವನ್ನು ಅಲೆದು ನಮ್ಮ ಜನರ ಬದುಕು ಮತ್ತು ಆಚಾರ-ವಿಚಾರಗಳನ್ನು ಅರ್ಥ ಮಾಡಿಕೊಂಡು ನಂತರ ಅದಕ್ಕೆ ಹೊಂದಿಕೊಂಡು ಹೋಗುವಂತೆ ಸ್ವಾತಂತ್ರ್ಯ ಹೋರಾಟ ಪ್ರಾರಂಭಿಸಿದರು. ಅಲ್ಲದೇ ದೇಶದ ಜನರಿಗಾಗಿ ಗಾಂಧೀಜಿ ಅವರೇ ಸ್ವತಃ ʼಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡುವ ಮೂಲಕ ಜೈಲು ಸೇರಿ ಹೋರಾಟ ಮುಂದುವರೆಸಿ 1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದು ಗಾಂಧೀಜಿ ಅವರ ತ್ಯಾಗದ ಬಗ್ಗೆ ವಿವರಿಸಿಕೊಟ್ಟರು.

ಇದೇ ಸಂದರ್ಭದಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಬಗ್ಗೆ ಮಾತನಾಡಿ, ದಾದಾ ಸಾಹೇಬ್‌ ಅಂಬೇಡ್ಕರ್‌ ಅವರು ನೀಡಿದ ಸಂವಿಧಾನದ ಆಶಯಗಳನ್ನು ಈಡೇರಿಸುವ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಜಾರಿ ಮಾಡಿದ್ದೇವೆ. ನಮ್ಮ ಪಂಚ ಗ್ಯಾರಂಟಿಗಳು ಬಡವರಿಗೆ ಆರ್ಥಿಕ ಸ್ವಾತಂತ್ರ್ಯ ಒದಗಿಸಿಕೊಡುತ್ತವೆ ಎಂದು ಹೇಳಿದರು.

ಗಾಂಧೀಜಿ ಅವರ ದಿನಾಚರಣೆಯಲ್ಲಿ ಇಂದು ನಾವು ನೀವೆಲ್ಲರೂ ಕಲಿಯಬೇಕಾದ ಮುಖ್ಯ ಅಂಶವೆಂದರೆ ಆತ್ಮಸಾಕ್ಷಿಯ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದುದು. ಆದ್ದರಿಂದ ನಾವು ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದರ ಮೂಲಕ ನಾವು ಗಾಂಧೀಜಿ ಅವರಿಗೆ ಸಲ್ಲಿಸುವ ದೊಡ್ಡ ಗೌರವವಾಗಿದೆ ಎಂದು ತಿಳಿಸಿದರು.

 

Tags: