ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಸರ್ವೋದಯ, ಡಾ.ಬಿ.ಆರ್.ಅಂಬೇಡ್ಕರ್ ಅವರ ಅಂತ್ಯೋದಯವೇ ನಮ್ಮ ಸರ್ಕಾರದ ಧ್ಯೇಯ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಗಾಂಧೀಜಿ ಜಯಂತಿ ಪ್ರಯುಕ್ತ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಗಾಂಧೀಜಿ ಜನ್ಮ ದಿನಾಚರಣೆ ಮತ್ತು ಸ್ವಚ್ಛತಾ ಆಂದೋಲನ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಹಾತ್ಮ ಗಾಂಧೀಜಿ ಮೊದಲು ಗ್ರಾಮೀಣ ಭಾರತವನ್ನು ಅಲೆದು ನಮ್ಮ ಜನರ ಬದುಕು ಮತ್ತು ಆಚಾರ-ವಿಚಾರಗಳನ್ನು ಅರ್ಥ ಮಾಡಿಕೊಂಡು ನಂತರ ಅದಕ್ಕೆ ಹೊಂದಿಕೊಂಡು ಹೋಗುವಂತೆ ಸ್ವಾತಂತ್ರ್ಯ ಹೋರಾಟ ಪ್ರಾರಂಭಿಸಿದರು. ಅಲ್ಲದೇ ದೇಶದ ಜನರಿಗಾಗಿ ಗಾಂಧೀಜಿ ಅವರೇ ಸ್ವತಃ ʼಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡುವ ಮೂಲಕ ಜೈಲು ಸೇರಿ ಹೋರಾಟ ಮುಂದುವರೆಸಿ 1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದು ಗಾಂಧೀಜಿ ಅವರ ತ್ಯಾಗದ ಬಗ್ಗೆ ವಿವರಿಸಿಕೊಟ್ಟರು.
ಇದೇ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಮಾತನಾಡಿ, ದಾದಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ಈಡೇರಿಸುವ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ಜಾರಿ ಮಾಡಿದ್ದೇವೆ. ನಮ್ಮ ಪಂಚ ಗ್ಯಾರಂಟಿಗಳು ಬಡವರಿಗೆ ಆರ್ಥಿಕ ಸ್ವಾತಂತ್ರ್ಯ ಒದಗಿಸಿಕೊಡುತ್ತವೆ ಎಂದು ಹೇಳಿದರು.
ಗಾಂಧೀಜಿ ಅವರ ದಿನಾಚರಣೆಯಲ್ಲಿ ಇಂದು ನಾವು ನೀವೆಲ್ಲರೂ ಕಲಿಯಬೇಕಾದ ಮುಖ್ಯ ಅಂಶವೆಂದರೆ ಆತ್ಮಸಾಕ್ಷಿಯ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದುದು. ಆದ್ದರಿಂದ ನಾವು ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದರ ಮೂಲಕ ನಾವು ಗಾಂಧೀಜಿ ಅವರಿಗೆ ಸಲ್ಲಿಸುವ ದೊಡ್ಡ ಗೌರವವಾಗಿದೆ ಎಂದು ತಿಳಿಸಿದರು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…