siddaramaiah
ಬೆಂಗಳೂರು : ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳು ತಮ್ಮ ಪ್ರವಾಸ ಕಾರ್ಯಕ್ರಮವನ್ನು ಮೊದಲೇ ಸಾರ್ವಜನಿಕರಿಗೆ ಲಭ್ಯವಾಗುವಂತೆ ಪ್ರಕಟಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಶುಕ್ರವಾರ ವಿಧಾನಸೌಭದ ಕೊಠಡಿಯಲ್ಲಿ ಎಲ್ಲಾ ಜಿಲ್ಲೆಗಳ ಡಿಸಿ, ಎಸ್.ಪಿ ಹಾಗೂ ಸಿಇಒಗಳ ಸಭೆ ನಡೆಸಿ ಅವರು ಮಾತನಾಡಿದರು.
ಕೆಲವು ಜಿಲ್ಲಾಧಿಕಾರಿಗಳು, ಸಿಇಒಗಳು ಸರಿಯಾಗಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಲಭ್ಯವಾಗದಿರುವ ಬಗ್ಗೆ ದೂರುಗಳು ಬಂದಿವೆ. ಸಾರ್ವಜನಿಕ ಭೇಟಿಯ ಅವಧಿಯನ್ನು ಮೊದಲೇ ಪ್ರಕಟಿಸಬೇಕು. ಶೋಷಿತರು, ಬಡವರು, ಜನಸಾಮಾನ್ಯರು ಸಾಮಾನ್ಯವಾಗಿ ಜಿಲ್ಲಾಧಿಕಾರಿ ಅವರ ಕಚೇರಿಗೆ ಬರುತ್ತಾರೆ. ಅಂತವರ ಸಂಕಷ್ಟಗಳನ್ನು ನೀವೇ ಆಲಿಸದಿದ್ದರೆ ಅದನ್ನು ಬಗೆಹರಿಸುವವರು ಯಾರು? ಯಾರ ಬಳಿ ಅವರು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಬೇಕು? ಎಂದು ಪ್ರಶ್ನಿಸಿದರು.
ಅಧಿಕಾರಿಗಳು ತಪಾಸಣಾ ವರದಿ ಹಾಗೂ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಶಾಲೆಗಳು, ಹಾಸ್ಟೆಲ್ಗಳು , ವಸತಿ ಶಾಲೆಗಳು, ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸಲು ನಿರಂತರವಾಗಿ ಭೇಟಿ ನೀಡಬೇಕು. ಮುನ್ಸೂಚನೆ ಇಲ್ಲದೇ ಇಂತಹ ಭೇಟಿಯನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು ಎಂದು ಪದೇ ಪದೇ ಸೂಚನೆ ನೀಡಿದ್ದೇನೆ. ಆದರೂ ಕೆಲವರು ಇದನ್ನು ಪಾಲಿಸಿಲ್ಲ ಎನ್ನುವ ವರದಿ ನನಗೆ ಬಂದಿದೆ ಗರಂ ಆದರು.
ನಿಮ್ಮ ಅಧೀನದಲ್ಲಿರುವ ಇಲಾಖೆಗಳು, ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುವುದನ್ನು ಖಾತ್ರಿಪಡಿಸುವುದು ನಿಮ್ಮ ಜವಾಬ್ದಾರಿ. ನೀವು ದಕ್ಷತೆಯಿಂದ ಕಾರ್ಯನಿರ್ವಹಿಸದಿದ್ದರೆ ಅಧೀನ ಅಧಿಕಾರಿಗಳು ಕಾರ್ಯನಿರ್ವಹಿಸುವುದನ್ನು ಹೇಗೆ ನಿರೀಕ್ಷಿಸಬಹುದು? ಎಂದು ಪ್ರಶ್ನಿಸಿದರು.
ಜಿಲ್ಲೆಯಲ್ಲಿ ಜನಸಾಮಾನ್ಯರಿಗೆ ಆರೋಗ್ಯ, ಸಾರಿಗೆ ಸಂಚಾರದಂತಹ ಮೂಲಭೂತ ಸೌಕರ್ಯಗಳು ಲಭಿಸದಿದ್ದರೆ ಅದನ್ನು ಆಡಳಿತದ ವೈಫಲ್ಯವೆಂದೇ ಪರಿಗಣಿಸಬೇಕಾಗಿದೆ. ಹಾಡಿಗಳಲ್ಲಿ ಶಾಲೆ, ರಸ್ತೆ, ಆಸ್ಪತ್ರೆಯಂತಹ ಮೂಲಸೌಲಭ್ಯ ಒದಗಿಸಲು ಇಂದಿಗೂ ಸರಿಯಾಗಿ ಯಾಕೆ ಸಾಧ್ಯವಾಗಿಲ್ಲ; ಅವರಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಸರಿಯಾಗಿ ಹಕ್ಕು ಒದಗಿಸಲು ಯಾಕೆ ಸಾಧ್ಯವಾಗಿಲ್ಲ. ಜಿಲ್ಲಾಧಿಕಾರಿಗಳು, ಸಿಇಒಗಳು ಇಂತಹ ಹಾಡಿಗಳಿಗೆ ನಿರಂತರ ಭೇಟಿ ನೀಡಬೇಕು ಎಂದು ನಿರ್ದೇಶನ ನೀಡಿದರು.
ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ವಾಸವಿರಬೇಕು. ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ಲಭ್ಯವಿದ್ದು, ಜನರಿಗೆ ಲಭ್ಯವಿರಬೇಕು. ಇದನ್ನು ಜಿಲ್ಲಾಧಿಕಾರಿಗಳು ಖಾತ್ರಿಪಡಿಸಬೇಕು. ಕೇಂದ್ರ ಸ್ಥಾನದಲ್ಲಿರದ ಅಧಿಕಾರಿಗಳ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ನನಗೆ ವರದಿ ನೀಡಬೇಕು ಎಂದು ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಲ್ಲಿ ಕನಿಷ್ಟ ಎರಡು ಬಾರಿ ಆಯಾ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಬೇಕು. ಅದರೊಂದಿಗೆ ಶಾಲೆ, ಹಾಸ್ಟೆಲ್, ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ವರದಿಯನ್ನು ಮುಖ್ಯ ಕಾರ್ಯದರ್ಶಿಯವರಿಗೆ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ಯಳಂದೂರು: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿನಲ್ಲಿ ಸಿಲುಕಿದ ವ್ಯಕ್ತಿ 4 ತಾಸು ಒದ್ದಾಟ ನಡೆಸಿದ ಘಟನೆ ಯಳಂದೂರು ತಾಲ್ಲೂಕಿನ ಗಂಗವಾಡಿಯಲ್ಲಿ…
ಮೈಸೂರು: ರಾಜ್ಯ ರಾಜಕಾರಣದಲ್ಲಿ ಕುರ್ಚಿ ಕಾದಾಟ ತೀವ್ರಗೊಳ್ಳುತ್ತಿದ್ದಂತೆ, ಅಹಿಂದ ಸಮಾವೇಶದ ಹೆಸರಿನಲ್ಲಿ ಭಾರೀ ರಾಜಕೀಯ ಚಟುವಟಿಕೆಗಳಿಗೆ ವೇಗ ಸಿಕ್ಕಿದೆ. ಮುಖ್ಯಮಂತ್ರಿ…
ಮೈಸೂರು: ಚಿರತೆಯೊಂದು ರಾತ್ರೋರಾತ್ರಿ ಬೀದಿ ನಾಯಿಯನ್ನು ಹೊತ್ತೊಯ್ದಿರುವ ಘಟನೆ ಮೈಸೂರಿನ ಹೊರವಲಯದ ಬೆಳಗಾವಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡು…
ಬೆಂಗಳೂರು,- ನಿರಂತರ ಏರಿಕೆಯಿಂದಾಗಿ ಚಿನ್ನ, ಬೆಳ್ಳಿ ಬೆಲೆಯು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ. ಇಂದು ಪ್ರತೀ ಗ್ರಾಂ ಚಿನ್ನಕ್ಕೆ (24 ಕ್ಯಾರೆಟ್)…
ಅಮೇರಿಕಾ: ಯುವ ರೋಗಿಯನ್ನು ಹಾಗೂ ಇತರ ಏಳು ಜನರನ್ನು ಸಾಗಿಸುತ್ತಿದ್ದ ಮೆಕ್ಸಿಕ್ನ ನೌಕಾಪಡೆಯ ಸಣ್ಣ ವಿಮಾನವು ಗಾಲ್ವೆಸ್ಟನ್ ಬಳಿ ಪತನಗೊಂಡು…
ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.…