ಬೆಳಗಾವಿ: ಸಿಎಂ ಗಮನಕ್ಕೆ ತರದೇ ಯಾವುದೇ ಇಲಾಖೆಯಲ್ಲೂ ವರ್ಗಾವಣೆ ಮಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳಿಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದ್ದಾರೆ.
ಈ ಕುರಿತು ಅಧಿಕೃತವಾಗಿ ವಿವಿಧ ಇಲಾಖೆಗಳಿಗೆ ಸುತ್ತೋಲೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಯಾವುದೇ ಕಾರಣಕ್ಕೂ ಸಿಎಂ ಅನುಮತಿ ಇಲ್ಲದೆ, ಯಾವುದೇ ಇಲಾಖೆಯ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು. ಸಿಎಂ ಗಮನಕ್ಕೆ ತರದೇ ವರ್ಗಾವಣೆ ಆದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ಸರ್ಕಾರಿ ಅಧಿಕಾರಿಗಳು ತಮಗೆ ಇಷ್ಟ ಬಂದಂತೆ ವರ್ಗಾವಣೆ ಆಗುತ್ತಿದ್ದರು. ಆದರೆ ಇದೀಗ ಸಿಎಂ ಸಿದ್ದರಾಮಯ್ಯ ಅವರು ವರ್ಗಾವಣೆ ದಂಧೆಗೆ ಬ್ರೇಕ್ ಹಾಕಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರಿ ಅಧಿಕಾರಿಗಳನ್ನು ಯಾವುದೇ ಇಲಾಖೆಯಲ್ಲೂ ಬೇಕಾಬಿಟ್ಟಿ ವರ್ಗಾವಣೆ ಮಾಡುವಂತಿಲ್ಲ. ಇನ್ನು ಮುಂದೆ ಸಿಎಂ ಗಮನಕ್ಕೆ ತರದೇ ಯಾವುದೇ ಸರ್ಕಾರಿ ಅಧಿಕಾರಿಗಳನ್ನು ವರ್ಗಾವಣೆ ಮಾಡಬಾರದು. ಒಂದು ವೇಳೆ ವರ್ಗಾವಣೆ ಮಾಡಿದರೆ ಅದಕ್ಕೆ ಕಚೇರಿಯ ಮುಖ್ಯಸ್ಥರೇ ಹೊಣೆಗಾರರಾಗಿರುತ್ತಾರೆ. ಹೀಗಾಗಿ ಅವರ ವಿರುದ್ಧವೇ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.